ಕರ್ನಾಟಕ

karnataka

ETV Bharat / state

ಎರಡು ಕೋಮಿನ ಗುಂಪುಗಳ ನಡುವೆ ಗಲಾಟೆ: ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ ನಿರ್ಮಾಣ - ಕೋಮುಗಳ ನಡುವೆ ಗಲಾಟೆ

ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕ್ರೀಡಾಕೂಟದ ವೇಳೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಆಗಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

A fight between two groups of people in shimogga
ಎರಡು ಕೋವಿನ ಗುಂಪುಗಳ ನಡುವೆ ಗಲಾಟೆ

By

Published : Aug 22, 2022, 5:43 PM IST

ಶಿವಮೊಗ್ಗ:ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯಮಟ್ಟದ ಶಾಲಾ ಕ್ರೀಡಾಕೂಟ ನಡೆಯುತ್ತಿತ್ತು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ಉಂಟಾಗಿದೆ. ಹಾಗಾಗಿ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಏಕಾಏಕಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್‌ ಮಾಡಿಸಿದ್ದಾರೆ.

ಗಲಾಟೆ ಅಂತ್ಯಗೊಂಡು ಎಲ್ಲುರೂ ಹೋಗುವ ವೇಳೆ ಮತ್ತೆ ಎರಡು ಕೋಮಿನ ಗುಂಪುಗಳ ನಡುವೆ ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿ ಮಾರಾಮಾರಿಯಾಗಿದೆ. ಈ ವೇಳೆ ಗಾಯಗೊಂಡ ಗಾಯಾಳುಗಳನ್ನು ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿರಾಳಕೊಪ್ಪ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ಗಸ್ತು ಆರಂಭಿಸಿದ್ದಾರೆ. ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ:ಶಿವಮೊಗ್ಗ ಚೂರಿ ಇರಿತ ಪ್ರಕರಣ.. ಪೊಲೀಸರ ಪಥಸಂಚಲನದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಭಾಗಿ

ABOUT THE AUTHOR

...view details