ಕರ್ನಾಟಕ

karnataka

ETV Bharat / state

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ವ್ಯಕ್ತಿ ಆತ್ಮಹತ್ಯೆ - a man committed suicide at shivamogga

ಶಿವಮೊಗ್ಗ ರೈಲು ನಿಲ್ದಾಣದ ಪ್ಲಾಟ್ ಫಾರಂನಲ್ಲಿ ಅಪರಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

suicide
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

By

Published : Apr 6, 2023, 8:25 AM IST

ಶಿವಮೊಗ್ಗ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ನಡೆದಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ರೈಲು ಹೊರಟ ಬಳಿಕ ಕೊನೆಯ ಪ್ಲಾಟ್ ಫಾರಂನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ಲಾಟ್ ಫಾರಂನ‌ ಮೇಲ್ಛಾವಣಿಗೆ ನೇಣು ಹಾಕಿಕೊಂಡಿದ್ದು, ಈ ಭಾಗದಲ್ಲಿ ಕೆಲಸ ಮಾಡುವವರು ಶವವನ್ನು ನೋಡಿ ರೈಲ್ವೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಮಹಜರು ಮಾಡಿ ಶವವನ್ನು ಕೆಳಗೆ ಇಳಿಸಿ, ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಮೃತ ವ್ಯಕ್ತಿಯನ್ನು ಸುಮಾರು 30 ವರ್ಷ ವಯಸ್ಸಿನ ಯುವಕ ಎಂದು ಅಂದಾಜಿಸಲಾಗಿದೆ. ಈತ‌ ಯಾರು, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದರು ಎಂಬ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಮೃತನ ಎದೆಯ ಮೇಲೆ ವಿಷ್ಣುದಾದ ಎಂದು ಕೈ ಮೇಲೆ ರಾಜಾಹುಲಿ ಎಂದು ಹಚ್ಚೆ ಇದೆ. ಜೊತೆಗೆ, ಜೇಬಿನಲ್ಲಿ ವಿಳಾಸ ಸೇರಿದಂತೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕೊನೆ ಭಾಗದ ಫ್ಲಾಟ್ ಫಾರಂನ ವಿದ್ಯುತ್ ದೀಪ ಆಫ್ ಮಾಡಲಾಗುತ್ತದೆ. ಈ ವೇಳೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ :ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಮದ್ರಾಸ್​ ಐಐಟಿಯ ಪಿಹೆಚ್‌ಡಿ ವಿದ್ಯಾರ್ಥಿ

ರೈತ ಆತ್ಮಹತ್ಯೆ : ಕಳೆದ ಮೂರು ದಿನಗಳ ಹಿಂದೆ ಹೊನ್ನಾವರ ತಾಲೂಕಿನ ಅನಂತವಾಡಿಯ ಜಡ್ಡಿಯಲ್ಲಿ ಬೆಳೆ ಸರಿಯಾಗಿ ಬಾರದೇ ಇದ್ದುದ್ದರಿಂದ ರೈತನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ರಾಮನಾಯ್ಕ (72) ಆತ್ಮಹತ್ಯೆಗೆ ಶರಣಾದ ರೈತ. ಇವರು 2 ಎಕರೆ 5 ಗುಂಟೆ ಜಮೀನು ಹೊಂದಿದ್ದು, ಶೇಂಗಾ ಮತ್ತು ಭತ್ತವನ್ನು ಬೆಳೆಯುತ್ತಿದ್ದರು. ಜೊತೆಗೆ, ವಿ ಎಸ್ಎಸ್ ಸೊಸೈಟಿಯಲ್ಲಿ 1 ಲಕ್ಷ ರೂಪಾಯಿ ಬೆಳೆ ಸಾಲ ಮಾಡಿದ್ದರು. ಬ್ಯಾಂಕ್ ಸಾಲ ಹೇಗೆ ತೀರಿಸಬೇಕೆಂದು ಆತಂಕಗೊಂಡು ಉದ್ವೇಗಕ್ಕೊಳಗಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ :ಇಬ್ಬರು ಮಕ್ಕಳ ಸಮೇತ ಸಂರಕ್ಷಿತ ಬುಡಕಟ್ಟು ಜನಾಂಗದ ದಂಪತಿ ಆತ್ಮಹತ್ಯೆ

ಇಬ್ಬರು ಮಕ್ಕಳ ಸಮೇತ ದಂಪತಿ ಆತ್ಮಹತ್ಯೆ : ಇನ್ನು ಏಪ್ರಿಲ್​ 3 ರಂದು ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ದಂಪತಿ ಮೊದಲು ತಮ್ಮ ಮಕ್ಕಳನ್ನು ಕೊಂದು ನಂತರ ಅವರೂ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದರು. ಬಗೀಚಾ ಪೊಲೀಸ್ ಠಾಣಾ ವ್ಯಾಪ್ತಿಯ ಸಂಹರ್ ಬಹಾರ್ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಮರದ ಕೆಳಗೆ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದವು. ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ :ಸಾಲದ ಶೂಲಕ್ಕೆ ರೈತ ಆತ್ಮಹತ್ಯೆ, ಅನಾರೋಗ್ಯದಿಂದ ಮಹಿಳಾ ಪಿಎಸ್​ಐ ಸಾವು.. ಕಾರವಾರದ ಇನ್ನಿತರ ಸುದ್ದಿಗಳು

ABOUT THE AUTHOR

...view details