ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಕೊರೊನಾಗೆ ಮತ್ತೊಂದು ಬಲಿ.. ಸಾವಿನ ಸಂಖ್ಯೆ 41ಕ್ಕೆ ಏರಿಕೆ - ಶಿವಮೊಗ್ಗ ಕೊರೊನಾ ಡೆತ್ ನ್ಯೂಸ್

ನಿನ್ನೆ ಜಿಲ್ಲೆಯಲ್ಲಿ ಪೌರ ಕಾರ್ಮಿಕ‌ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಜಿಲ್ಲೆಯ‌ ಜನತೆಯಲ್ಲಿ ಆಂತಕವನ್ನುಂಟು ಮಾಡಿದೆ..

Shivmogga
Shivmogga

By

Published : Aug 3, 2020, 5:18 PM IST

ಶಿವಮೊಗ್ಗ: ಜಿಲ್ಲೆಯಲ್ಲಿ‌ ಕೊರೊನಾ ಸೋಂಕಿಗೆ ಇಂದು ಸಹ ಒಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 41ಕ್ಕೆ ಏರಿದೆ.

ಶಿವಮೊಗ್ಗ ನಗರದ ಮಲ್ಲಿಕಾರ್ಜುನ ಬಡಾವಣೆಯ 57 ವರ್ಷದ ವ್ಯಕ್ತಿಯೊಬ್ಬರು ಮನೆಯಲ್ಲಿಯೇ ಸಾವನ್ನಪ್ಪಿದ್ದರು. ಇವರ ಮರಣದ ನಂತರ ಗಂಟಲು ದ್ರವ ಪರೀಕ್ಷೆ‌ ನಡೆಸಲಾಗಿದ್ದು, ಕೊರೊನಾ ಪಾಸಿಟಿವ್ ವರದಿ ಬಂದಿದೆ.

ನಿನ್ನೆ ಜಿಲ್ಲೆಯಲ್ಲಿ ಪೌರ ಕಾರ್ಮಿಕ‌ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಜಿಲ್ಲೆಯ‌ ಜನತೆಯಲ್ಲಿ ಆಂತಕವನ್ನುಂಟು ಮಾಡಿದೆ.

ABOUT THE AUTHOR

...view details