ಕರ್ನಾಟಕ

karnataka

ETV Bharat / state

ಸಾಗರದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿ: 18 ವಿದ್ಯಾರ್ಥಿಗಳಿಗೆ ಗಾಯ - ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್​ ಪಲ್ಟಿಯಾಗಿ 18 ಜನ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

school tour bus overturned
school-tour-bus-overturned

By

Published : Dec 15, 2022, 12:48 PM IST

ಶಿವಮೊಗ್ಗ: ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 18 ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕರೂರು ಹೋಬಳಿಯ ತುಮರಿ ಗ್ರಾಮದ ಬಳಿ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದ್ದು, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 18 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕೂಡಲೇ ಮಕ್ಕಳನ್ನು ಖಾಸಗಿ ವಾಹನ ಸೇರಿದಂತೆ, ಆಂಬ್ಯುಲೆನ್ಸ್ ಮೂಲಕ ಸಾಗರದ ಉಪ ವಿಭಾಗಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ದರ್ಮಾಪುರದ ಸರ್ಕಾರಿ ಹೈಸ್ಕೂಲಿನಿಂದ ಶಾಲಾ ಮಕ್ಕಳನ್ನು ಶಿವಮೊಗ್ಗ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶಕ್ಕೆ ಪ್ರವಾಸಕ್ಕೆ ಕರೆದೊಯ್ಯಲಾಗುತಿತ್ತು ಎಂದು ತಿಳಿದುಬಂದಿದೆ. ಬಸ್​ನಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೆ ಬ್ಯಾಕೋಡು ಹಾಸ್ಟಲ್​ನಲ್ಲಿ ಆಶ್ರಯ ನೀಡಲಾಗಿದೆ.

ಇದನ್ನೂ ಓದಿ:ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಬಿಎಂಟಿಸಿ ಬಸ್​

ABOUT THE AUTHOR

...view details