ಶಿವಮೊಗ್ಗ :ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ.
ನೇಣು ಬಿಗಿದುಕೊಂಡು ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ.. - ಆತ್ಮಹತ್ಯೆ
ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದ್ದು,ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
![ನೇಣು ಬಿಗಿದುಕೊಂಡು ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ..](https://etvbharatimages.akamaized.net/etvbharat/prod-images/768-512-4165396-thumbnail-3x2-heartjpg.jpg)
SSLC student committed suicide
ಸಾಗರ ಪಟ್ಟಣದ ಎಸ್‌ಎನ್‌ನಗರದ ನಿವಾಸಿ ರುಹಿನಾ(17) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈಕೆ ಸಾಗರದ ಸರ್ಕಾರಿ ಉರ್ದು ಫ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದಳು. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ರುಹಿನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.