ಶಿವಮೊಗ್ಗ: ನಗರದ ಹೊರ ವಲಯದ ಹಾಸ್ಟೆಲ್ನಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.
ಬಸ್ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿಬಿವಿಪಿ ಪ್ರತಿಭಟನೆ - Latest Protest News In Shivamogga
ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುಲು ಸರಿಯಾದ ಬಸ್ ಸೌಲಭ್ಯವಿಲ್ಲ ಎಂದು ಆರೋಪಿಸಿ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದಿಂದ ಹಾಸ್ಟೆಲ್ ಬಲು ದೂರ, ಬಸ್ ಸೌಕರ್ಯಕ್ಕಾಗಿ ವಿಬಿವಿಪಿ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು, ಮಲ್ಲಿಗೇನಹಳ್ಳಿ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದೆ. ಈ ಹಾಸ್ಟೆಲ್ ನಗರದಿಂದ 8 ಕಿ.ಮೀ ದೂರದಲ್ಲಿದೆ. ಹಾಸ್ಟೆಲ್ ನಿಂದ ಕಾಲೇಜಿಗೆ ಬರಲು ಸರಿಯಾದ ಸಮಯಕ್ಕೆ ಬಸ್ ಇಲ್ಲ. ಇದರಿಂದ ನಿತ್ಯ ತರಗತಿಯನ್ನು ತಪ್ಪಿಸಿ ಕೊಳ್ಳುವಂತಾಗಿದೆ ಆರೋಪಿಸಿ ಪ್ರತಿಭಟನೆ ನಡೆಸಿದರು.
ಈ ಮೊದಲು ಇದೇ ವಿದ್ಯಾರ್ಥಿಗಳ ಹಾಸ್ಟೆಲ್ ನಗರದ ಮಧ್ಯೆ ಇತ್ತು. ಈಗ ನಗರದಿಂದ ದೂರ ಇರುವುದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರಲು ಸಮಸ್ಯೆಯಾಗುತ್ತಿದೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.