ಶಿವಮೊಗ್ಗ:ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಎಪಿಎಂಸಿ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಎಸಿಬಿ ಬಲೆಗೆ - Shivamogga APMC officer arrest
ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸೂಪರಿಂಟೆಂಡೆಂಟ್ ಎಸಿಬಿ ಬಲೆಗೆ
ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಾಮ‍್ಯಾ ನಾಯ್ಕ ಅವರನ್ನು ಬಂಧಿಸಿದ್ದಾರೆ.
5 ಸಾವಿರ ರೂ. ಹಣವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಜೆ.ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಅಧಿಕಾರಿಯನ್ನು ಬಂಧಿಸಿದ್ದಾರೆ.