ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ - ಎಸಿಬಿ ದಾಳಿ ಸುದ್ದಿ

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ‌ನಿರ್ದೇಶಕ ಸುರೇಶ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ACB raid
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ‌ನಿದೇರ್ಶಕ ಸುರೇಶ್

By

Published : Dec 31, 2020, 12:48 PM IST

ಶಿವಮೊಗ್ಗ:ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ‌ನಿರ್ದೇಶಕ ಜಿ.ಜಿ. ಸುರೇಶ್​ರವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಿ.ಜಿ. ಸುರೇಶ್​ರವರ ಶಿವಮೊಗ್ಗದ ಮಲ್ಲೇಶ್ವರಂ ಮನೆ, ಗೋಪಾಲಗೌಡ ಬಡಾವಣೆ ಮನೆ ಹಾಗೂ ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದ ಸರ್ವೆ ನಂಬರ್ 13 ರ ತೋಟ ಹಾಗೂ ತೋಟದ ಮನೆ ಮೇಲೆ ದಾಳಿ ನಡೆಸಲಾಗಿದೆ.

ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶರವರ ನೇತೃತ್ವದಲ್ಲಿ ಶಿವಮೊಗ್ಗ ಡಿವೈಎಸ್ಪಿ ಲೋಕೇಶ್, ದಾವಣಗೆರೆ ಡಿವೈಎಸ್ಪಿ ಪರಮೇಶ್ವರ್ ಹಾಗೂ ಇನ್ಸಪೆಕ್ಟರ್ ಧೀರೇಂದ್ರ ರವರು ದಾಳಿ ನಡೆಸಿದ್ದಾರೆ.

ಸುರೇಶ್​ ಅವರು ಅಕ್ರಮವಾಗಿ ಆಸ್ತಿ ಗಳಿಸಿರುವ ಬಗ್ಗೆ ಎಸಿಬಿಗೆ ದೂರು ಬಂದಿದ್ದರಿಂದ ದಾಳಿ ನಡೆಸಲಾಗಿದೆ. ಈ ವೇಳೆ ಹಲವು ಮಹತ್ವದ ದಾಖಲೆಗಳನ್ನು ಎಸಿಬಿ ತಂಡವು ವಶಕ್ಕೆ ಪಡೆದುಕೊಂಡಿದೆ. ಎಸಿಬಿ ಅಧಿಕಾರಿಗಳು ಪರಿಶೀಲನೆಯನ್ನು ಮುಂದುವರೆಸಿದ್ದಾರೆ.

ABOUT THE AUTHOR

...view details