ಕರ್ನಾಟಕ

karnataka

ETV Bharat / state

ಲಂಚ ಪಡೆಯುತ್ತಿದ್ದ ವೇಳೆ ಗ್ರಾಪಂ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ - ಎಸಿಬಿ ದಾಳಿ

ಇಂದು 25 ಸಾವಿರ ರೂ.ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಧ್ಯಕ್ಷೆ ವೇಣಿ ಕಣ್ಣನ್ ಅವರನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿದ್ದಾರೆ..

ಎಸಿಬಿ ದಾಳಿ
ಎಸಿಬಿ ದಾಳಿ

By

Published : Oct 22, 2021, 8:05 PM IST

ಶಿವಮೊಗ್ಗ :ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯೊಬ್ಬರು ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು. ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು.

2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50 ಸಾವಿರ ರೂ. ಕೊಡುವಂತೆ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ ಬೇಡಿಕೆ ಇಟ್ಟಿದ್ದರು. ಅಂತೆಯೇ ಇಂದು 25 ಸಾವಿರ ರೂ.ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಧ್ಯಕ್ಷೆ ವೇಣಿ ಕಣ್ಣನ್ ಅವರನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿದ್ದಾರೆ.

ABOUT THE AUTHOR

...view details