ಶಿವಮೊಗ್ಗ:ಭದ್ರಾವತಿ ತಾಲೂಕು ಹೊಳೆಹೊನ್ನೂರು ಉಪ ವಿಭಾಗದ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲಂಚ ಸ್ವೀಕಾರ ಮಾಡುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಗಂಗಾ ಕಲ್ಯಾಣ ಯೋಜನೆಯ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ನೀಡಲು ಫಲಾನುಭವಿ ಆನವೇರಿಯ ಹರೀಶ್ ಎಂಬುವರಿಗೆ 5 ಸಾವಿರ ರೂ. ಲಂಚದ ಬೇಡಿಕೆಯನ್ನು ಇಂಜಿನಿಯರ್ ಪ್ರಕಾಶ್ ಇಟ್ಟಿದ್ದರಂತೆ. ಇಂದು ಹೊಳೆಹೊನ್ನೂರಿನ ಕಚೇರಿಯಲ್ಲಿ ಲಂಚ ಸ್ವೀಕಾರ ಮಾಡುವಾಗ ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಸಿ, ಲಂಚದ ಹಣದ ಸಮೇತ ಅಧಿಕಾರಿಯನ್ನು ಹಿಡಿದಿದ್ದಾರೆ.