ಶಿವಮೊಗ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕ್ರೆಬೈಲು ಗ್ರಾಮದ ಬಳಿ ಸಂಭವಿಸಿದೆ.
ಶಿವಮೊಗ್ಗ: ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ದುರ್ಮರಣ, ಇಬ್ಬರಿಗೆ ಗಾಯ - Tunganagar Police Station
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ದುರ್ಮರಣ
ಮಹಮ್ಮದ್ ಜುಬೇರ್(23), ಆಫ್ರಿದಿ(24) ಹಾಗೂ ಸಮೀವುಲ್ಲಾ(25) ಮೃತರು. ಸಮೀರ್ ಹಾಗೂ ವಸಿವುಲ್ಲಾ ಎಂಬುವರು ಗಾಯಗೊಂಡಿದ್ದಾರೆ. ಮೃತರು ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ದುರ್ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.