ಶಿವಮೊಗ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ಜೀವನಗುಣಮಟ್ಟ ಸುಧಾರಿಸಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ತಿಳಿಸಿದ್ದಾರೆ.
ಸಫಾಯಿ ಕರ್ಮಚಾರಿಗಳ ಜೀವನ ಗುಣಮಟ್ಟ ಸುಧಾರಣೆಗೆ ಕ್ರಮ ಅಗತ್ಯ: ಜಗದೀಶ್ ಹಿರೇಮನಿ - ಸಫಾಯಿ ಕರ್ಮಚಾರಿಗಳ ಸ್ಥಿತಿಗತಿ
ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಸಫಾಯಿ ಕರ್ಮಚಾರಿಗಳ ಸ್ಥಿತಿಗತಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಸಫಾಯಿ ಕರ್ಮಚಾರಿಗಳ ಸ್ಥಿತಿಗತಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಲಾಗಿರುವ 24 ಮ್ಯಾನ್ಯುವೆಲ್ ಸ್ಕಾವೆಂಜರ್ಸ್‍ಗಳ ಜೀವನ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ 40,000/-ರೂ.ಗಳ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೇ ಅವರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿಕೊಡಲು ಸೂಚಿಸಲಾಗಿದೆ. ಸಫಾಯಿ ಕರ್ಮಚಾರಿಗಳು ಮರಣ ಹೊಂದಿದ್ದಲ್ಲಿ ಅವರ ಕುಟುಂಬದ ಅವಲಂಬಿತರಿಗೆ ಸರ್ಕಾರದ ಇತರ ವಸತಿ ಯೋಜನೆಯಡಿ ವಸತಿ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
70-80ರ ದಶಕದಲ್ಲಿ ಪೌರಕಾರ್ಮಿಕರು ಎಲ್ಲಿ ವಾಸವಾಗಿದ್ದರೋ ಅಲ್ಲೇ ಅವರಿಗೆ ಮನೆಗಳ ಹಕ್ಕುಪತ್ರ ನೀಡಬೇಕು. ಮನೆಗಳು ಶಿಥಿಲವಾಗಿದ್ದಲ್ಲಿ ಮನೆ ನಿರ್ಮಿಸಿ ಕೊಡಬೇಕು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ಸಮಸ್ಯೆಗೆ ಮುಂದಿನ 2-3 ತಿಂಗಳಲ್ಲಿ ಹಕ್ಕುಪತ್ರ ನೀಡಿ. ಅಂತಹವರಿಗೆ ಮನೆ ನಿರ್ಮಿಸಿಕೊಳ್ಳಲು ಮ್ಯಾನ್ಯುವೆಲ್ ಸ್ಕಾವೆಂಜರ್ಸ್ ಯೋಜನೆಯಡಿಯಲ್ಲಿ ವಿಶೇಷ ಅನುದಾನ ಕೊಡಿಸಲು ಯತ್ನಿಸುವುದಾಗಿ ಅವರು ತಿಳಿಸಿದ್ರು.