ಶಿವಮೊಗ್ಗ:ಈ ಹಿಂದೆ ಯುಪಿಎ ಸರ್ಕಾರ ಮಾಡಿದ ಸಾಲದ ಮೊತ್ತವನ್ನು ತೀರಿಸೋಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆಗುತ್ತಿದೆ ಎಂದು ನಟಿ ಹಾಗೂ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲಗಳ ಬೆಲೆ ಏರಿಕೆಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಯುಪಿಎ ಸರ್ಕಾರ ಮಾಡಿರುವ ಅನಾಚಾರಗಳನ್ನು ಮುಚ್ಚಬೇಕು ಅಂದರೆ ಬೆಲೆ ಏರಿಕೆ ಮಾಡಬೇಕಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡಿಸೇಲ್ ಅಭಾವ ಹೆಚ್ಚಾಗಿರುವುದರಿಂದ ತೈಲ ಬೆಲೆ ಹೆಚ್ಚಾಗುತ್ತಿದೆ ಎಂದು ಸಮಜಾಯಿಷಿ ನೀಡಿದರು.