ಕರ್ನಾಟಕ

karnataka

ETV Bharat / state

ಸಂಸ್ಕೃತ ಗ್ರಾಮ ಮತ್ತೂರಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಸಂಸ್ಕೃತದಲ್ಲಿಯೇ ಮಾತು - ಸಂಸ್ಕೃತ ಒಂದು ಶಾಸ್ತ್ರೀಯ ಭಾಷೆ

ಶಿವಮೊಗ್ಗ ನಗರದಿಂದ 10 ಕಿಮೀ ದೂರವಿರುವ ಮತ್ತೂರು ಗ್ರಾಮಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್ ಗ್ರಾಮದಲ್ಲಿ ಸಿಕ್ಕವರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ.

ADGP Alok Kumar visited Sanskrit village Mathur
ಎಡಿಜಿಪಿ ಅಲೋಕ್ ಕುಮಾರ್ ಸಂಸ್ಕೃತ ಗ್ರಾಮ ಮತ್ತೂರಿಗೆ ಭೇಟಿ

By

Published : Aug 19, 2022, 9:55 AM IST

Updated : Aug 19, 2022, 11:02 AM IST

ಶಿವಮೊಗ್ಗ: ಸಾರ್ವಕರ್ ಫ್ಲೆಕ್ಸ್​ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಪರಿಸ್ಥಿತಿಯಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಸಂಸ್ಕೃತ ಗ್ರಾಮ ಮತ್ತೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ ಗ್ರಾಮಸ್ಥರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದು, ಆ ವಿಡಿಯೋವನ್ನು ಅಲೋಕ್ ಕುಮಾರ್​ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಶಿವಮೊಗ್ಗ ನಗರದಿಂದ 10 ಕಿಮೀ ದೂರವಿರುವ ಮತ್ತೂರು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಸಿಕ್ಕವರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಇದು ಒಂದು ರೀತಿ ಸಹಜ ಸಂಭಾಷಣೆ ಎಂಬುವಂತೆ ಇದೆ.

ಎಡಿಜಿಪಿ ಅಲೋಕ್ ಕುಮಾರ್ ಸಂಸ್ಕೃತ ಗ್ರಾಮ ಮತ್ತೂರಿಗೆ ಭೇಟಿ

ಈ ವಿಚಾರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೊಸ್ಟ್ ಮಾಡಿದ್ದಾರೆ. 'ಸಂಸ್ಕೃತ ಒಂದು ಶಾಸ್ತ್ರೀಯ ಭಾಷೆ, ಅದರ ದನಿಯೇ ಕಿವಿಗೆ ಸಂಗೀತವಿದ್ದಂತೆ, ಈ ನಿಟ್ಟಿನಲ್ಲಿ ಮತ್ತೂರಿಗೆ ಭೇಟಿ ನೀಡಿ ಅಲ್ಲಿನವರ ಜೊತೆ ಒಂದಿಷ್ಟು ಮಾತುಕತೆ ನಡೆಸಿದೆ. ಎಲ್ಲ ಶಾಸ್ತ್ರೀಯ ಭಾಷೆಗಳನ್ನು ರಕ್ಷಿಸುವ ಹಾಗೂ ಪ್ರೋತ್ಸಾಹಿಸುವ ಅಗತ್ಯತೆ ಇದೆ' ಎಂದು ಅಲೊಕ್ ಕುಮಾರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ :ಸರಣಿ ಹತ್ಯೆ; ಸಂಘಟನೆಗಳ ಪಾತ್ರವಿದ್ದರೆ ಚಾರ್ಜ್ ಶೀಟ್​​ನಲ್ಲಿ ಅದನ್ನೂ ದಾಖಲಿಸುತ್ತೇವೆ: ಡಿಜಿಪಿ ಸೂದ್

Last Updated : Aug 19, 2022, 11:02 AM IST

ABOUT THE AUTHOR

...view details