ಶಿವಮೊಗ್ಗ: ನಕಲಿ ಜಾತಿ ಪ್ರಮಾಣಪತ್ರ ನೀಡಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಉಪ ಕುಲಸಚಿವರಾಗಿ ಕಾರ್ಯನಿರ್ವಹಿಸಿ ಮೊನ್ನೆ ತಪ್ಪಿತಸ್ಥರೆಂದು ಸೇವೆಯಿಂದ ವಜಾ ಆಗಿರುವ ಸೀತಾರಾಮ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ರಾಜ್ಯಾಧ್ಯಕ್ಷ ಕೃಷ್ಣ ಸಿ.ಎಂ. ಒತ್ತಾಯಿಸಿದರು.
ಉಪ ಕುಲಸಚಿವ ಸೇವೆಯಿಂದ ವಜಾ ಆಗಿರುವ ಸೀತಾರಾಮ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ - ಕುವೆಂಪು ವಿಶ್ವವಿದ್ಯಾಲಯದಲ್ಲಿ ಉಪ ಕುಲಸಚಿವ ಸೀತಾರಾಮ ಮೇಲೆ ಕ್ರಿಮಿನಲ್ ಮೊಕದ್ದಮೆ
ಸೀತಾರಾಮ ಅವರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿರುವ ಕುರಿತು ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಕಳೆದ ಏಳು ತಿಂಗಳಿಂದ ಹೋರಾಟ ಮಾಡಿಕೊಂಡು ಬಂದಿತ್ತು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಷ್ಟು ವರ್ಷಗಳ ಕಾಲ ಸರ್ಕಾರದ ಸೌಲಭ್ಯ ಪಡೆದು ಆರ್ಥಿಕ ನಷ್ಟ ಭರಿಸುವಂತೆ ಆದೇಶಿಸಬೇಕು. ಸರ್ಕಾರಕ್ಕೆ ಸುಳ್ಳು ಜಾತಿ ಪ್ರಮಾಣಪತ್ರ ನೀಡಿ, ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಸೀತಾರಾಮ ಅವರು ಪರಿಶಿಷ್ಟ ಪಂಗಡ ಹಾಗೂ ಜಾತಿಗೆ ಮೀಸಲಿರಿಸಿದ್ದ ಹುದ್ದೆಯನ್ನು ಕಾನೂನು ಬಾಹಿರವಾಗಿ ಪಡೆದು ಅಪರಾಧವೆಸಗಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು ಸೀತಾರಾಮ ಅವರನ್ನು ಉಪಕುಲಸಚಿವರ ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ತಪ್ಪಿತಸ್ಥರಾಗಿರುವ ಸೀತಾರಾಮ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಇಷ್ಟು ವರ್ಷಗಳ ಕಾಲ ಸರ್ಕಾರದ ಸೌಲಭ್ಯ ಪಡೆದ ಎಲ್ಲಾ ಸೌಲಭ್ಯಗಳನ್ನು ಹಿಂತಿರುಗಿಸುವಂತೆ ಆದೇಶಿಸಿ ಆರ್ಥಿಕ ನಷ್ಟ ವಸೂಲಿ ಮಾಡಬೇಕು ಎಂದು ಆಗ್ರಹಿಸಿದರು.
ಸೀತಾರಾಮ ಅವರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿರುವ ಕುರಿತು ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಕಳೆದ ಏಳು ತಿಂಗಳಿಂದ ಹೋರಾಟ ಮಾಡಿಕೊಂಡು ಬಂದಿತ್ತು. ಈಗ ಈ ಹೋರಾಟದ ಫಲವಾಗಿ ಸೀತಾರಾಮ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದರು.