ಶಿವಮೊಗ್ಗ: ಈ ಚುನಾವಣೆ ಕೇವಲ ರಾಘವೇಂದ್ರ ಅವರನ್ನು ಸಂಸದರನ್ನಾಗಿ ಮಾಡುವುದಷ್ಟೇ ಅಲ್ಲ, ಅದರ ಜೊತೆಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಅವರನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
ಮೋದಿ ಅವರನ್ನು ಏಕೆ ಮತ್ತೊಮ್ಮೆ ಪ್ರಧಾನಿ ಮಾಡಬೇಕು? ಈ ಪ್ರಶ್ನೆಗೆ ಶಾ ಉತ್ತರಿಸಿದ್ದು ಹೀಗೆ - Amit shah
ಮೋದಿ ಅವರನ್ನು ಏಕೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು? ಪ್ರತಿಪಕ್ಷಗಳ ಇಂತಹ ಟೀಕೆಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.
ಭದ್ರಾವತಿಯಲ್ಲಿ ಬಿ.ವೈ.ರಾಘವೇಂದ್ರ ಪರ ರೋಡ್ ಶೋ ನಡೆಸಿದ ನಂತರ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು, ಮೋದಿ ಅವರನ್ನು ಏಕೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂಬುದರ ಬಗ್ಗೆ ವಿವರಣೆ ಕೊಟ್ಟರು.
ದೇಶದ ರಕ್ಷಣೆ ಮಾಡಲು ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ. ಹಾಗೇ ಭಯೋತ್ಪಾದನೆ ಮಟ್ಟ ಹಾಕಲು ಪ್ರಧಾನಿಯನ್ನಾಗಿ ಮಾಡಬೇಕಿದೆ. ಜೊತೆಗೆ ಪಾಕಿಸ್ತಾನದ ಬಾಯಿ ಮುಚ್ಚಿಸಲು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದು ಪ್ರತಿಪಕ್ಷದವರ ಟೀಕೆಗಳಿಗೆ ಪ್ರತ್ಯುತ್ತರ ನೀಡಿದರು. ಅದಕ್ಕಾಗಿ ಕಮಲದ ಗುರುತಿಗೆ ನಿಮ್ಮ ಮತ ನೀಡುವ ಮೂಲಕ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು. ಅಲ್ಲದೆ ನಾನು ಸಹ ಚುನಾವಣೆಯಲ್ಲಿ ನಿಂತಿರುವೆ. ಆದರೂ, ನಾನು ಪಕ್ಷದ ವರಿಷ್ಠರ ಮಾತಿನಂತೆ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಲು ಬಂದಿದ್ದೇನೆ ಎಂದರು.