ಶಿವಮೊಗ್ಗ: ಮಹಾತ್ಮ ಗಾಂಧಿ ಹಾಗೂ ಅವರ ಹೋರಾಟದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲಾಯಿತು.
ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಸದ ಅನಂತ್ ಕುಮಾರ್ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ - ಸಂಸದ ಅನಂತ್ ಕುಮಾರ್ ಹೆಗಡೆ
ಮಹಾತ್ಮ ಗಾಂಧಿ ಅವರ ಹೋರಾಟದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನವು ಪ್ರತಿ ವರ್ಷ ಗಾಂಧಿ ಜಯಂತಿಯನ್ನು ತಮ್ಮ ಕುಟುಂಬದ ಹಬ್ಬದ ರೀತಿ ಆಚರಣೆ ಮಾಡಿಕೊಂಡು ಬಂದಿದೆ. ಮಹಾತ್ಮ ಗಾಂಧಿಜೀ ದೇಶಕ್ಕೆ ಸತ್ಯ, ಅಹಿಂಸೆಯ ಮೂಲಕ ಸ್ವಾತಂತ್ರ ತಂದು ಕೊಟ್ಟರು. ಇದರಿಂದ ಅವರನ್ನು ಮಹಾತ್ಮ ಎಂದು ಕರೆಯಲಾಗುತ್ತದೆ. ಇಂತಹ ಮಹಾತ್ಮರ ಸ್ವಾತಂತ್ರ ಹೋರಾಟದ ಬಗ್ಗೆ ಸಂಸದ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಯುವ ಜನತೆಯಲ್ಲಿ ಗಾಂಧಿ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿದ್ದು, ಇಂತಹ ಸಂಸದರು ನಮ್ಮ ರಾಜ್ಯದವರು ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕಾಗಿ ತಕ್ಷಣ ಅನಂತಕುಮಾರ್ ಹೆಗಡೆ ಕ್ಷಮೆ ಕೇಳಬೇಕು. ಇವರ ವಿರುದ್ಧ ಪ್ರಧಾನಿ ಮೋದಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನ ಒತ್ತಾಯಿಸಿದೆ.