ಶಿವಮೊಗ್ಗ: ಪೋಕ್ಸೊ ಕೇಸ್ನಲ್ಲಿ ಬಂಧನವಾಗಿರುವ ಚಿತ್ರದುರ್ಗದ ಮುರುಘಾಶ್ರೀ ಅವರನ್ನು ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಡಿಸಾರ್ಜ್ ಮಾಡಲಾಗಿದೆ. ಎದೆ ನೋವಿನಿಂದ ಬಳಲುತ್ತಿದ್ದ ಮುರುಘಾಶ್ರೀ ಎರಡು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಬೆಳಗ್ಗೆ ಅವರಿಗೆ ಆ್ಯಂಜಿಯೋಗ್ರಾಂ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಶ್ರೀಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿಂದ ಚಿತ್ರದುರ್ಗದ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗುತ್ತದೆ.
ಮುರುಘಾಶ್ರೀಗೆ ಆ್ಯಂಜಿಯೋಗ್ರಾಂ ಶಸ್ತ್ರಚಿಕಿತ್ಸೆ ಯಶಸ್ವಿ ಆ್ಯಂಜಿಯೋಗ್ರಾಂನಲ್ಲಿ ಯಾವುದೇ ನ್ಯೂನತೆ ಕಂಡು ಬಂದಿರಲಿಲ್ಲ. ಅಲ್ಲದೆ ಚಿಕಿತ್ಸೆ ನಂತರ 24 ಗಂಟೆ ನಮ್ಮ ವೈದ್ಯರ ನಿಗಾದಲ್ಲಿದ್ದ ಶ್ರೀಗಳ ಆರೋಗ್ಯ ಸುಸ್ಥಿರವಾಗಿದ್ದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸ್ವಾಮಿಜಿಗೆ ಕರೋನರಿ ಆಂಜಿಯೋಗ್ರಾಂ ಚಿಕಿತ್ಸೆ ನಡೆಸಲಾಯಿತು. ಆ್ಯಂಜಿಯೋಗ್ರಾಂ ಯಶಸ್ವಿಯಾಗಿದೆ. ನಮ್ಮಲ್ಲಿಗೆ ಬಂದಾಗ ಇಸಿಜಿಯಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಆಗ ಅವರಿಗೆ ಆ್ಯಂಜಿಯೋಗ್ರಾಂ ಅವಶ್ಯಕತೆ ಇತ್ತು. ಸದ್ಯ ಸ್ವಾಮಿಜೀ ಫಿಜಿಕಲಿ ಫಿಟ್ ಆಗಿದ್ದಾರೆ ಎಂದು ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್