ಶಿವಮೊಗ್ಗ: ಭದ್ರಾವತಿಯ ಜೆಡಿಎಸ್ನ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ ಕೊರೊನಾಗೆ ಬಲಿಯಾಗಿದ್ದಾರೆ.
ಸಿಎಂ ತವರು ಜಿಲ್ಲೆಯಲ್ಲಿ ಮಾಜಿ ಶಾಸಕನಿಗೆ ಎದುರಾದ ಬೆಡ್ ಸಮಸ್ಯೆ... ಕೊರೊನಾಗೆ ಅಪ್ಪಾಜಿ ಗೌಡ ಬಲಿ! - ಅಪ್ಪಾಜಿ ಗೌಡ ಸಾವು 2020 ಸುದ್ದಿ,
ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡರು ಮಹಾಮಾರಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಸಿಎಂ ತವರು ಜಿಲ್ಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ಅಜ್ಜಾಜಿ ಗೌಡ ಕೊನೆಯುಸಿರೆಳೆದಿದ್ದಾರೆ.
ಕೊರೊನಾಗೆ ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಬಲಿ
ಅಪ್ಪಾಜಿ ಗೌಡ ರವರಿಗೆ 67 ವರ್ಷ ವಯಸ್ಸಾಗಿತ್ತು. ಈ ಹಿಂದೆ ಅಪ್ಪಾಜಿ ಗೌಡ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಕಳೆದೆರಡು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅಪ್ಪಾಜಿ ಗೌಡರನ್ನು ರಾತ್ರಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದರು. ಈ ವೇಳೆ ಎರಡು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಸಿಗದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ಕರೆದು ಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ.
ಅಪ್ಪಾಜಿ ಗೌಡರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
Last Updated : Sep 3, 2020, 6:21 AM IST