ಕರ್ನಾಟಕ

karnataka

ETV Bharat / state

ಹಾಲಿ ಗ್ರಾ.ಪಂ ಸದಸ್ಯರನ್ನೇ ಮುಂದುವರಿಸುವಂತೆ ಸಚಿವರಿಗೆ ಮನವಿ

ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯಿತಿಯ 5 ವರ್ಷಗಳ ಅವಧಿ ಮುಕ್ತಾಯವಾಗಿದ್ದು, ಕಾರಣಾಂತರಗಳಿಂದ ಚುನಾವಣೆ ಮುಂದೂಡಲ್ಪಟ್ಟಿದೆ. ಸರ್ಕಾರವು ನಾಮ ನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಹೊರಟಿದೆ. ಈ ಹಿನ್ನೆಲೆ ಹಾಲಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ನೇತೃತ್ವದಲ್ಲಿ ಗ್ರಾ.ಪಂ ಸದಸ್ಯರು ಸಚಿವ ಕೆ.ಎಸ್​.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.

By

Published : May 23, 2020, 11:11 PM IST

Appeal to the Minister to continue the members of the Gram Panchayat
ಹಾಲಿ ಗ್ರಾಮಪಂಚಾಯಿತಿ ಸದಸ್ಯರನ್ನೇ ಮುಂದುವರಿಸುವಂತೆ ಸಚಿವರಿಗೆ ಮನವಿ

ಶಿವಮೊಗ್ಗ:ಕೊರೊನಾ ಹಾಗೂ ಲಾಕ್​ಡೌನ್ ಹಿನ್ನೆಲೆ ಹಾಲಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ನೇತೃತ್ವದಲ್ಲಿ ಗ್ರಾ.ಪಂ ಸದಸ್ಯರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯಿತಿಯ 5 ವರ್ಷಗಳ ಅವಧಿ ಮುಕ್ತಾಯವಾಗಿದ್ದು, ಕಾರಣಾಂತರಗಳಿಂದ ಚುನಾವಣೆ ಮುಂದೂಡಲ್ಪಟ್ಟಿದೆ. ಆದರೆ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಯ ಅಧಿಕಾರವನ್ನು ಮುಂದುವರೆಸಲು ನಾಮ ನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಹೊರಟಿರುವ ಕ್ರಮ ಸರಿಯಾಗಿಲ್ಲ.ಹಾಗಾಗಿ ಮೊದಲು ಆಯ್ಕೆಯಾದ ಚುನಾಯಿತ ಸದಸ್ಯರನ್ನೇ ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಹಾಲಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರಿಸುವಂತೆ ಸಚಿವರಿಗೆ ಮನವಿ

ಗ್ರಾಮ ಪಂಚಾಯಿತಿ ಸದಸ್ಯರ ಬದಲಿಗೆ ಆಡಳಿತ ಮಂಡಳಿ ಸದಸ್ಯರನ್ನು ನಾಮ ನಿರ್ದೇಶನ ಮಾಡುವುದರಿಂದ ಗ್ರಾಮಗಳ ಅಭಿವೃದ್ಧಿ ಕಾರ್ಯಗಳು ಕುಂಠಿವಾಗುತ್ತದೆ‌. ಹಾಗಾಗಿ ಹಾಲಿ ಸದಸ್ಯರನ್ನೇ ಮುಂದುವರಿಸಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details