ಶಿವಮೊಗ್ಗ: ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡಲು ಪಿಎಫ್ಐ ಕಾರ್ಯಕರ್ತರ ವಶ: ಗೃಹ ಸಚಿವ ಆರಗ ಜ್ಞಾನೇಂದ್ರ - ಆರಗ ಜ್ಞಾನೇಂದ್ರ ಹೇಳಿಕೆ
ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತ ಕ್ರಮವಾಗಿ ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
![ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡಲು ಪಿಎಫ್ಐ ಕಾರ್ಯಕರ್ತರ ವಶ: ಗೃಹ ಸಚಿವ ಆರಗ ಜ್ಞಾನೇಂದ್ರ Araga Jnanendra](https://etvbharatimages.akamaized.net/etvbharat/prod-images/768-512-16484640-thumbnail-3x2-new.jpg)
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿರುವುದು
ತೀರ್ಥಹಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಮುಂಜಾನೆಯಿಂದ ರಾಜ್ಯಾದ್ಯಂತ ಎಸ್ಡಿಪಿಐ(ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಮತ್ತು ಪಿಎಫ್ಐ(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಯಾ ತಹಶೀಲ್ದಾರರ ಮುಂದೆ ಹಾಜರು ಪಡಿಸಲಾಗಿದೆ ಎಂದು ತಿಳಿಸಿದರು.