ಕರ್ನಾಟಕ

karnataka

ETV Bharat / state

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ.. ಗೃಹ ಸಚಿವರ ಭೇಟಿ-ತುರ್ತು ಕಾರ್ಯಕ್ಕೆ ಸೂಚನೆ - hill collapsed due to rain

ಮಳೆ ಆರ್ಭಟಕ್ಕೆ ಆಗುಂಬೆ ಘಾಟಿಯಲ್ಲಿ ಕುಸಿದ ಗುಡ್ಡ- ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ - ತುರ್ತು ಕಾರ್ಯಾಚರಣೆಗೆ ಸೂಚನೆ

Araga Jnanendra visited hill collapsed area of Agumbe ghat
ಗುಡ್ಡ ಕುಸಿತವಾದ ಸ್ಥಳಕ್ಕೆ ಗೃಹ ಸಚಿವರು ಭೇಟಿ

By

Published : Jul 10, 2022, 3:19 PM IST

ಶಿವಮೊಗ್ಗ: ಮಲೆನಾಡು-ಕರಾವಳಿ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇಂದು ಬೆಳಗಿನ ಜಾವ ಘಾಟಿಯಲ್ಲಿ ಭಾರಿ ಪ್ರಮಾಣದ ಮಣ್ಣು ಕುಸಿತವಾಗಿದೆ. ಈ ಹಿನ್ನೆಲೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮಣ್ಣು ಕುಸಿತವಾದ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಸ್ಥಳದಲ್ಲಿಯೇ ಬಿಡು ಬಿಟ್ಟಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್​​ಗಳ ಜೊತೆ ಚರ್ಚೆ ನಡೆಸಿದರು. ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯವನ್ನು ವೀಕ್ಷಿಸಿದರು. ಈ ರೀತಿ ಮಣ್ಣು ಕುಸಿದಿರುವುದು ಇದೇ ಮೊದಲು.

ಗುಡ್ಡ ಕುಸಿತವಾದ ಸ್ಥಳಕ್ಕೆ ಗೃಹ ಸಚಿವರ ಭೇಟಿ

ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಲು ಸೂಚನೆ ನೀಡಲಾಗಿದೆ. ವಾಹನ ಸಂಚಾರವನ್ನು ನಿಲ್ಲಿಸಲಾಗಿದೆ. ಮುಂದೆ ಏನು ಮಾಡಬೇಕೆಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು. ರಸ್ತೆ ಅಗಲೀಕರಣದ ಸರ್ವೇ ನಡೆಸಲು‌ 50 ಲಕ್ಷ ರೂ. ಬಿಡುಗಡೆಯಾಗಿದೆ. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಎಷ್ಟು ಬೇಗ ಆಗುತ್ತದೆಯೂ ಅಷ್ಟು ಬೇಗ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲು ಸೂಚಿಸಿರುವುದಾಗಿ ಗೃಹ ಸಚಿವರು ತಿಳಿಸಿದರು.

ಇದನ್ನೂ ಓದಿ:ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಬಂದ್

ABOUT THE AUTHOR

...view details