ಶಿವಮೊಗ್ಗ:ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಲು ತುಮಕೂರಿಗೆ ತೆರಳುತ್ತಿದ್ದ ರೈತರನ್ನು ಶಿವಮೊಗ್ಗದ ರೈಲ್ವೇ ನಿಲ್ದಾಣದಲ್ಲಿ ಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ರೈತರು ಪೊಲೀಸ್ ವಶಕ್ಕೆ - ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಬಂಧನ
ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಲು ತುಮಕೂರಿಗೆ ತೆರಳುತ್ತಿದ್ದ ರೈತರನ್ನು ಶಿವಮೊಗ್ಗದ ರೈಲ್ವೇ ನಿಲ್ದಾಣದಲ್ಲಿ ಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಬಂಧನ
ಬೆಳ್ಳಂಬೆಳಗ್ಗೆ ತಮ್ಮನ್ನು ವಶಕ್ಕೆ ಪಡೆದ ಪೊಲೀಸರ ನಡೆ ಹಾಗೂ ಪ್ರಧಾನಿ ಮೋದಿ ವಿರುದ್ಧ ರೈತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ಸಂಘದ ಜಿಲ್ಲಾಧ್ಯಕ್ಷ ಎಸ್. ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ. ಜಗದೀಶ್, ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಡಿ. ಮಂಜಪ್ಪ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಶಿವಮೊಗ್ಗ ತಾಲೂಕಾಧ್ಯಕ್ಷ ಸಿ. ಚಂದ್ರಪ್ಪ, ಭದ್ರಾವತಿ ತಾಲೂಕಾಧ್ಯಕ್ಷ ಜಿ.ಎನ್. ಪಂಚಾಕ್ಷರಿ ಹಾಗೂ ಇತರೆ ರೈತ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.