ಕರ್ನಾಟಕ

karnataka

ETV Bharat / state

ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ

ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರು ಸಹ ರಮೇಶ್ ಜಾರಕಿಹೊಳಿ ಅವರ ಕ್ಷೇತ್ರಕ್ಕೆ ಬಂದು ಅವರನ್ನು ಸೋಲಿಸುತ್ತೇವೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು ಹಾಜರಿದ್ದರು..

arrest-of-ramesh-zarakiholi-
ಶಿವಮೊಗ್ಗದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ

By

Published : Mar 27, 2021, 10:11 PM IST

ಶಿವಮೊಗ್ಗ :ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.

ಶಿವಮೊಗ್ಗದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ

ಓದಿ: ಡಿಕೆಶಿ ವಿರುದ್ಧ ಅವಾಚ್ಯ ಪದ ಬಳಕೆ.. ವಿಷಾದಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ತಕ್ಷಣ ಮಾಜಿ ಸಚಿವರನ್ನು ಬಂಧಿಸಬೇಕೆಂದು ಆಗ್ರಹಿಸಿದರು. ಸಿಡಿ ಮಹಿಳೆಯು ದೂರು ನೀಡಿದರು ಸಹ ಪೊಲೀಸರು ಇನ್ನೂ ಬಂಧಿಸದೆ ಇರುವುದನ್ನು ನೋಡಿದರೆ, ಸರ್ಕಾರ ಲಾಬಿ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ.

ಸಿಡಿಯಲ್ಲಿರುವ ಮಹಿಳೆಗೆ ಬೆದರಿಕೆ ಹಾಕಿ ಆಕೆಯನ್ನು ಪೊಲೀಸ್ ಠಾಣೆಗೆ ಬರದಂತೆ ಮಾಡಲಾಗುತ್ತಿದೆ. ಈ ಕುರಿತು ರಾಜ್ಯ ಸರ್ಕಾರ ಸಂತ್ರಸ್ತೆಗೆ ರಕ್ಷಣೆ ನೀಡಬೇಕಿದೆ. ಆಗ ಮಾತ್ರ ಸಿಡಿಯಲ್ಲಿನ ಮಹಿಳೆಯು ನೇರವಾಗಿ ಪೊಲೀಸರ ಮುಂದೆ ಹಾಜರಾಗಲು ಧೈರ್ಯವಾಗಿ ಬರುತ್ತಾರೆ. ಸರ್ಕಾರ ರಮೇಶ್ ಜಾರಕಿಹೊಳಿಯನ್ನು ರಕ್ಷಣೆ ಮಾಡುವತ್ತ ಮುಂದಾಗಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ಧೋರಣೆಯಾಗಿದೆ.

ಇನ್ನು, ರಮೇಶ್ ಜಾರಕಿಹೊಳಿರವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ದ ಏಕವಚನ ಪದ ಪ್ರಯೋಗ ಮಾಡಿರುವುದು ಖಂಡನೀಯವಾಗಿದೆ. ರಾಮನಗರಕ್ಕೆ ಬಂದು ಡಿ.ಕೆ.ಶಿವಕುಮಾರ್ ಅವರನ್ನು ಸೋಲಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರು ಸಹ ರಮೇಶ್ ಜಾರಕಿಹೊಳಿ ಅವರ ಕ್ಷೇತ್ರಕ್ಕೆ ಬಂದು ಅವರನ್ನು ಸೋಲಿಸುತ್ತೇವೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು ಹಾಜರಿದ್ದರು.

ABOUT THE AUTHOR

...view details