ಶಿವಮೊಗ್ಗ:ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಸಿಇಎನ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರು ಅಂದರ್ - ಸಿಇಎನ್ ಪೊಲೀಸ್ ಠಾಣೆ
ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಹಾಗೂ ಸನ್ ರೈಸರ್ಸ್ ತಂಡಗಳ ನಡುವಿನ ಪಂದ್ಯಾವಳಿಯ ಸೋಲು - ಗೆಲುವಿನ ಬಗ್ಗೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರು ಅಂದರ್
ನಗರದ ಮಲವಗೊಪ್ಪ ಬಸ್ಸ್ಟಾಪ್ನಲ್ಲಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 40 ಸಾವಿರ ರೂಪಾಯಿ ಹಾಗೂ ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆಯಲಾಗಿದೆ.