ಶಿವಮೊಗ್ಗ: ನಂಬರ್ ಪ್ಲೇಟ್ ಇಲ್ಲದ ಪಲ್ಸರ್ ಬೈಕ್ನಲ್ಲಿ ಬಂದ ಅಪರಿಚಿತರ ಗುಂಪೊಂದು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ.
ಭದ್ರಾವತಿ ನಗರದ ಭೂತನಗುಡಿಯ ಯುವಕ ಹಡಮ್ ಸಿಂಗ್( 30) ಇರಿತಕ್ಕೊಳಗಾದ ಯುವಕ ಎಂದು ತಿಳಿದು ಬಂದಿದೆ.

ನಿನ್ನೆ ತಡರಾತ್ರಿ ಹಾರ್ಡ್‌ವೇರ್ ಶಾಪ್ ಬಂದ್ ಮಾಡಿ ಮನೆಗೆ ತೆರಳುವಾಗ ಬೈಕ್ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಗಾಯಾಳು ಹಡಮ್ ಸಿಂಗ್‌ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.