ಶಿವಮೊಗ್ಗ: ಬೆಳಗ್ಗೆ ಲಷ್ಕರ್ ಮೊಹಲ್ಲಾದಲ್ಲಿ ಭಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದ ಹಿನ್ನೆಲೆ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ ಸುತ್ತಮುತ್ತ ದಿಢೀರ್ ಬಂದ್ ಮಾಡಲಾಗಿದೆ. ಈ ಘಟನೆಯನ್ನು ಖಂಡಿಸಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಎಸ್ಪಿ ಆಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ನಂತರ ಗಾಂಧಿ ಜಜಾರ್ನ ಬಟ್ಟೆ ಮಾರ್ಕೆಟ್ ಬಳಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ, ಗಾಂಧಿ ಬಜಾರ್ನ ವ್ಯಾಪಾರಿಗಳು ಏಕಾಏಕಿ ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದಾರೆ.