ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ನಡೆಸಿದ ಹಲ್ಲೆ ಪ್ರಕರಣ ಸಂಬಂಧ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ವಿಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ನಗರದಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವುದರಿಂದ ಎಲ್ಲೆಡೆ ಸ್ತಬ್ಧತೆಯ ಛಾಯೆ ಆವರಿಸಿದೆ. ಹೆಚ್ಚುವರಿ ಪೊಲೀಸ್ ಅಧಿಕಾರಿಗಳು ನಗರದಾದ್ಯಂತ ನಿಯೋಜಿಸಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.