ಕರ್ನಾಟಕ

karnataka

By

Published : Jan 22, 2020, 8:07 PM IST

ETV Bharat / state

ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ.. ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ

ತಾಲೂಕಿನ ಕಲ್ಲುಗಂಗೂರಿನ ಗೆಜ್ಜೆನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಭೂಮಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಕ್ಕೆ  ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳು ದಾಳಿ ನಡೆಸಿ 10 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Attack on illegal mining site in Kallangur Forest Area
Attack on illegal mining site in Kallangur Forest Area

ಶಿವಮೊಗ್ಗ: ಕಲ್ಲುಗಂಗೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ ನಡೆದಿದೆ.ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗಣಿಗಾರಿಕೆ ನಡೆಸುತ್ತಿದ್ದಸ್ಥಳದಲ್ಲಿದ್ದ 10 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಕಲ್ಲುಗಂಗೂರು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ..

ತಾಲೂಕಿನ ಕಲ್ಲುಗಂಗೂರಿನ ಗೆಜ್ಜೆನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಭೂಮಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಹಳ ದಿನಗಳಿಂದ ನಡೆಯುತ್ತಿತ್ತು. ಈ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಮೊದಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದಾಗ ಕಲ್ಲುಗಂಗೂರು ವ್ಯಾಪ್ತಿಯ ಎಲ್ಲಾ ಗಣಿಗಾರಿಕೆಗಳು ಅಕ್ರಮ ಎಂದು ತಿಳಿದು ಬಂದಿದೆ. ನಂತರ ಶಂಕರ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ ವೇಳೆ ಟಿಪ್ಪರ್ ಲಾರಿಗಳು ಹಾಗೂ ಡಿಗಿಂಗ್ ಮಾಡಲು ಬಳಸುವ ಐದಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳನ್ನ ವಶಕ್ಕೆ ಪಡೆದು ಕೊಳ್ಳಲಾಗಿದೆ.

ಈಗಾಗಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಸುವವರಿಗೆ ಸಾಕಷ್ಟು ಸಲ ನೋಟಿಸ್ ನೀಡಿದ್ದರುೂ ಸಹ ಯಾವುದೇ ಬದಲಾವಣೆ ಕಾಣದ ಕಾರಣ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ‌ ಅರಣ್ಯಾಧಿಕಾರಿ‌ ಶಂಕರ್​ರವರು ತಿಳಿಸಿದ್ದಾರೆ.

ABOUT THE AUTHOR

...view details