ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಸರ್ಕಾರದ ಪುರುಷ ನೌಕರರಿಗೂ ಶಿಶು ಪಾಲನ ರಜೆಯ ನಿರ್ಧಾರ: ಆಯನೂರು‌ ಮಂಜುನಾಥ್​ ಸ್ವಾಗತ - ಶಿಶುಪಾಲನಾ ರಜೆ

ರಾಜ್ಯ ಕಾಂಗ್ರೆಸ್​ ಸರ್ಕಾರ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಆದೇಶ ಹೊರಡಿಸಿ ಮಂಜೂರು ಮಾಡಿದ್ದು, ಈ ನಿರ್ಧಾರಕ್ಕೆ ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಸ್ವಾಗತಾರ್ಹ ಎಂದಿದ್ದಾರೆ.

JDS leader Ayanur Manjunath
ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್

By

Published : Jun 16, 2023, 6:59 AM IST

Updated : Jun 16, 2023, 8:03 AM IST

ಮಾಜಿ ಎಂಎಲ್ಸಿ ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್

ಶಿವಮೊಗ್ಗ:ಕಾಂಗ್ರೆಸ್ ಸರ್ಕಾರ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಮಂಜೂರು ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಎಂಎಲ್ಸಿ ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ. ನಿನ್ನೆ(ಗುರುವಾರ) ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನೆಯ ಉದ್ದೇಶದಿಂದ ತಮ್ಮ ಇಡೀ ಸೇವಾ ಅವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ ಅಂದರೆ 180 ದಿನಗಳ ಕಾಲ ಶಿಶುಪಾಲನಾ ರಜೆ ಮಂಜೂರು ಮಾಡಲಾಗಿತ್ತು.

ಆದರೆ, ಈ ಆದೇಶ ಪುರುಷರಿಗೆ ಅನ್ವಯಿಸುತ್ತಿರಲಿಲ್ಲ. ಅಕಸ್ಮಾತ್ ತಾಯಿ ಮರಣ ಹೊಂದಿದಲ್ಲಿ ಅದರ ಜವಾಬ್ದಾರಿಯನ್ನು ತಂದೆಯೇ ಹೊರಬೇಕಿತ್ತು. ಶಿಶುಪಾಲನಾ ರಜೆ ಎನ್ನುವುದು ಲಿಂಗಭೇದ ಇಲ್ಲದೇ ಇರಬೇಕು. ಇಂತಹ ಸಂದರ್ಭದಲ್ಲಿ ಪುರುಷರಿಗೂ ಸಹ ರಜೆ ಸೌಲಭ್ಯ ವಿಸ್ತರಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಸರಿಯಾಗಿದೆ ಎಂದಿದ್ದಾರೆ.

ಸರ್ಕಾರಿ ನೌಕರರ ಕೆಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಹೊಂದಿದೆ. ಆದರೆ ಪಿಂಚಣಿಗೆ ಸಂಬಂಧಿಸಿದಂತೆ ಎನ್ ಪಿ ಎಸ್ ಮತ್ತು ಒಪಿಎಸ್ ವಿಷಯಕ್ಕೆ ಸಂಬಂಧಿಸಿದಂತೆ ಯಾವ ಭರವಸೆಯೂ ಈಡೇರಿಲ್ಲ. ಸರ್ಕಾರವೇನೋ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವ ಬಗ್ಗೆ ಭರವಸೆ ನೀಡಿದೆ. ಇದು ಕೇವಲ ಭರವಸೆ ಆಗಬಾರದು. ಹೊಸ ಸರ್ಕಾರ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದಿದ್ದಾರೆ.

ದರ ಏರಿಕೆ ಮಾಡಿರುವುದರಿಂದ ಸಣ್ಣ ಕೈಗಾರಿಕೆಗಳಿಗೆ ತೊಂದರೆಯಾಗಲಿದೆ. ಅಲ್ಲದೇ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕೆಲವು ಸಣ್ಣ ಕೈಗಾರಿಕಾ ಉದ್ಯಮಿಗಳು ಈ ರಾಜ್ಯವನ್ನೇ ಬಿಟ್ಟುಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕನ್ನಡಿಗರು ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ. ಆದ್ದರಿಂದ ರಾಜ್ಯ ಸರ್ಕಾರ ಈಗ ಏರಿಸಿರುವ ವಿದ್ಯುತ್ ದರವನ್ನು ಮರುಪರಿಶೀಲನೆಗೆ ಒಳಪಡಿಸಬೇಕು. ಕೈಗಾರಿಕಾ ಸ್ನೇಹಿ ದರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:Electricity price hike: ವಿದ್ಯುತ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಸೇರಿ ಕಾರ್ಯಕರ್ತರು ಪೊಲೀಸ್​ ವಶ

ರಾಜ್ಯ ಕಾಂಗ್ರೆಸ್​ ಸರ್ಕಾರದ ಆದೇಶ ನೋಡುವುದಾದರೆ:ಒಂಟಿ ಪೋಷಕಾರಗಿರುವ ಅವಿವಾಹಿತ/ವಿಚ್ಛೇದಿತ/ವಿಧುರ ಪುರಷ ರಾಜ್ಯ ಸರ್ಕಾರಿ ನೌಕರರಿಗೂ ಆರು ತಿಂಗಳ ಅವಧಿಗೆ ಅಂದರೆ 180 ದಿನಗಳು ಶಿಶುಪಾಲನಾ ರಜೆ ಸೌಲಭ್ಯವನ್ನು 2021 ರಲ್ಲಿ ಸರ್ಕಾರಿ ಆದೇಶದಲ್ಲಿ ವಿಧಿಸಲಾಗಿರುವ ಷರತ್ತುಗಳನ್ವಯ ಶಿಶುಪಾಲನಾ ರಜೆ ಮಂಜೂರು ಮಾಡಲಾಗುತ್ತದೆ.

ಜೊತೆಗೆ ಶಿಶುಪಾಲನ ರಜೆಯನ್ನು ಪಡೆದ ಅವಧಿಯಲ್ಲಿ ಸಂಬಂಧಿತ ಪುರುಷ ನೌಕರರು ವಿವಾಹ ಮಾಡಿಕೊಂಡರೆ ಆ ದಿನಾಂಕದಿಂದ ಶಿಶುಪಾಲನಾ ರಜೆ ತಾನಾಗಿಯೇ ರದ್ದಾಗಲಿದೆ. ಒಂಟಿ ಪೋಷಕರಾಗಿರುವ ಅವಿವಾಹಿತ/ವಿವಾಹ ವಿಚ್ಛೇದಿತ/ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಮಕ್ಕಳ ಆರೈಕೆಗಾಗಿ ಶಿಶುಪಾಲನಾ ರಜೆಯ ಅವಶ್ಯಕತೆ ಇದೆ ಎಂದು ಪ್ರಸ್ತಾವನೆಗಳು ಸ್ವೀಕೃತವಾಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಿಶುಪಾಲನಾ ರಜೆ ಸೌಲಭ್ಯ ಒದಗಿಸಿ ಆದೇಶಿಸಿದೆ.

ಇದನ್ನೂ ಓದಿ:ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ ವಿಸ್ತರಣೆ

Last Updated : Jun 16, 2023, 8:03 AM IST

ABOUT THE AUTHOR

...view details