ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿದ್ದು, ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಶಿವಪ್ಪನಾಯಕ ಪ್ರತಿಮೆ ಎದುರು ಘೋಷಣೆ ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.
ರಾಮ ಮಂದಿರ ಭೂಮಿ ಪೂಜೆ: ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ನಿಂದ ಸಂಭ್ರಮಾಚರಣೆ - ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿದ್ದು, ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಇದೇ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ ಅಡ್ವಾಣಿ ಹಾಗೂ ಶ್ರೀರಾಮ ಮಂದಿರಕ್ಕೆ ಹೋರಾಡಿದ ಎಲ್ಲರಿಗೂ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ಸರ್ವ ಧರ್ಮಗಳ ಸಮನ್ವಯ ತಾಣ ಆಗಬೇಕಿದೆ ಎಂದು ಯುವ ಕಾಂಗ್ರೆಸ್ ನಗರಾಧ್ಯಕ್ಷ ಹೆಚ್.ಪಿ.ಗೀರಿಶ್ ತಿಳಿಸಿದರು.