ಶಿವಮೊಗ್ಗ: ನಮ್ಮ ಕುಟುಂಬದ ವಿರುದ್ಧ ಮೊದಲಿನಿಂದಲೂ ಸಹ ಪಿತೂರಿ ನಡೆಸಲಾಗುತ್ತಿದೆ. ನಮಗೆ ಕಾನೂನಿನ ಮೇಲೆ ಗೌರವವಿದೆ. ಹೀಗಾಗಿ ಈ ಪ್ರಕರಣದಿಂದ ಹೊರ ಬರುವ ವಿಶ್ವಾಸವಿದೆ ಎಂದು ಸಂಸದ ಬಿ ವೈ ರಾಘವೇಂದ್ರ ತಮ್ಮ ಕುಟುಂಬದ ವಿರುದ್ಧ ಮತ್ತೆ ತನಿಖೆಗೆ ಆದೇಶ ನೀಡಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಮಲಿಂಗಂ ಕಂಪನಿಯಿಂದ ಲಂಚ ಪಡೆದ ಪ್ರಕರಣದಲ್ಲಿ ಮತ್ತೆ ಕೋರ್ಟ್ ತನಿಖೆಗೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದರು. ಈ ಹಿಂದೆ ಇದೇ ಪ್ರಕರಣವನ್ನು ನ್ಯಾಯಾಲಯ ವಜಾ ಮಾಡಿತ್ತು. ಆದರೂ ಸಹ ಖಾಸಗಿ ವ್ಯಕ್ತಿಯೊಬ್ಬರು ಮತ್ತೆ ದೂರು ನೀಡುವ ಪ್ರಯತ್ನ ಮಾಡಿದ್ದಾರೆ.