ಶಿವಮೊಗ್ಗ: ಅಸ್ಪೃಶ್ಯತೆಯ ವಿರುದ್ಧ ಹೋರಾಟ ನಡೆಸಿದ ಬಾಬು ಜಗಜೀವನ್ ರಾಮ್ ಅವರು ಮಹನೀಯರ ಸಾಲಿನಲ್ಲಿ ಸೇರಿದವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಕೊರೊನಾ ಆತಂಕದ ನಡುವೆ ಬಾಬು ಜಗಜೀವನರಾಮ್ ಜಯಂತಿ - ಬಾಬು ಜಗಜೀವನ್ ರಾಮ್ ಜಯಂತಿ
ಅಂಬೇಡ್ಕರ್ ಹಾಗೂ ಜಗಜೀವನರಾಮ್ ಅವರಂತಹ ಮಹನೀಯರಿಂದ ಅಸ್ಪೃಶ್ಯತೆ ಹೋಗಲಾಡಿದಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನರಾಮ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮರ ಹಾಗೂ ಸಂಘ, ಸಂಸ್ಥೆಗಳ ನಿರಂತರ ಪ್ರಯತ್ನದಿಂದ ಅಸ್ಪಶ್ಯತೆ ಮೆಟ್ಟಿನಿಲ್ಲಲು ಸಾಧ್ಯವಾಗಿದೆ. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರಂತಹ ಮಹಾನ್ ಪುರುಷರು ಇಂದಿಗೂ ಮಾದರಿ ಎಂದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ ಇದ್ದರು.