ಶಿವಮೊಗ್ಗ :ಸರ್ವೋಚ್ಛ ನ್ಯಾಯಾಲಯ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಿಂದ ಕೈ ಬಿಡುವಂತೆ ಆದೇಶ ನೀಡಿದೆ ಎಂಬ ಸುಳ್ಳು ವದಂತಿ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ ನಗರದ ಪ್ರಧಾನ ಅಂಚೆ ಕಚೇರಿಯ ಮುಂದೆ ಪತ್ರ ಚಳವಳಿ ಹಮ್ಮಿಕೊಳ್ಳಲಾಗಿತ್ತು.
ಶೋಷಿತ ಸಮುದಾಯಗಳ ವಿರುದ್ಧ ಸುಳ್ಳು ವದಂತಿ.. ಬಂಜಾರ ವಿದ್ಯಾರ್ಥಿ ಸಂಘದಿಂದ ಪತ್ರ ಚಳವಳಿ!! - latest shivamogga news
ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳು ಇಂದಿಗೂ ಸಂಕಷ್ಟದಲ್ಲಿ ಬದುಕುತ್ತಿವೆ. ಇಂತಹ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಸುಳ್ಳು ಸುದ್ದಿ ಹರಡಿಸುವ ಮೂಲಕ ಸಮುದಾಯದಲ್ಲಿ ಸಂಘರ್ಷ ಉಂಟು ಮಾಡುತ್ತಿದ್ದಾರೆ.
ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮಕ್ಕೆ ಆಗ್ರಹ
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ನಾಯ್ಕ್, ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳು ಇಂದಿಗೂ ಸಂಕಷ್ಟದಲ್ಲಿ ಬದುಕುತ್ತಿವೆ. ಇಂತಹ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಸುಳ್ಳು ಸುದ್ದಿ ಹರಡಿಸುವ ಮೂಲಕ ಸಮುದಾಯದಲ್ಲಿ ಸಂಘರ್ಷ ಉಂಟು ಮಾಡಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಎಂದರು.
ಈ ರೀತಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಈ ಸಮುದಾಯಗಳಿಗೆ ಸರ್ಕಾರ ವಿಶೇಷ ಕೊರೊನಾ ಪ್ಯಾಕೇಜ್ ಘೋಷಿಸಬೇಕು ಎಂದು ಶಾಸಕರು ಇದೇ ವೇಳೆ ಒತ್ತಾಯಿಸಿದರು.