ಶಿವಮೊಗ್ಗ: ಬಿಜೆಪಿಯಲ್ಲಿ ವಿಜಯೇಂದ್ರರಿಗೆ ಟಿಕೆಟ್ ನೀಡಲ್ಲ ಎಂದು ಯಡಿಯೂರಪ್ಪ ಕ್ಷೇತ್ರವನ್ನು ಘೋಷಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರರಿಗೆ ಟಿಕೆಟ್ ಸಿಗದಂತೆ ಮಾಡಿದ್ದು ಪ್ರಹ್ಲಾದ್ ಜೋಷಿ, ಈಶ್ವರಪ್ಪ, ಸಿ.ಟಿ. ರವಿ ಅವರಿಗೆಲ್ಲ ಯಡಿಯೂರಪ್ಪ ಮತ್ತು ಅವರ ಕುಟುಂಬ ಕಂಡರೆ ಆಗುವುದಿಲ್ಲ ಎಂದೆನಿಸುತ್ತದೆ. ಆದ ಕಾರಣ ಶಿಕಾರಿಪುರದಲ್ಲಿ ಬಿಎಸ್ವೈ ತಮ್ಮ ಕ್ಷೇತ್ರವನ್ನು ಮಗ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ.
ನಾನು ರಾಜ್ಯ ಪ್ರವಾಸ ಮಾಡಿ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದು ಹೇಳುತ್ತಿದ್ದ ವಿಜಯೇಂದ್ರರಿಗೆ ಈಗ ಶಿಕಾರಿಪುರಕ್ಕೆ ಸೀಮಿತ ಮಾಡಲಾಗಿದೆ. ಯಡಿಯೂರಪ್ಪ ಅವರನ್ನು ಬಿಜೆಪಿಯ ಪಾಪಿಗಳು ಅಧಿಕಾರದಿಂದ ಕೆಳಗೆ ಇಳಿಸಿದ್ದು, ಇದಕ್ಕೆ ಸ್ಪಷ್ಟವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಅವರ ಪಕ್ಷ ಯಾರಿಗಾದರೂ ಟಿಕೆಟ್ ನೀಡಲಿ, ನಾವು ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನ ಕಣಕ್ಕಿಳಿಸಿ ಅವರಿಗೆ ಸುಲಭದ ಜಯ ಸಿಗದ ಹಾಗೆ ಮಾಡುತ್ತೇವೆ ಎಂದರು.