ಶಿವಮೊಗ್ಗ: ಬೆಂಗಳೂರಿನ ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ತಾಲ್ಲೂಕು ಭೋವಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅಖಂಡ ಶ್ರೀನಿವಾಸ್ ಮೇಲಿನ ಹಲ್ಲೆ ಖಂಡಿಸಿ ಭೋವಿ ಸಮಾಜದ ವತಿಯಿಂದ ಪ್ರತಿಭಟನೆ - ಅಖಂಡ ಶ್ರೀನಿವಾಸ್ ಮೇಲಿನ ಹಲ್ಲೆ ಖಂಡಿಸಿ ಭೋವಿ ಸಮಾಜದ ವತಿಯಿಂದ ಪ್ರತಿಭಟನೆ
ಶಾಸಕ ಅಖಂಡ ಶ್ರೀನಿವಾಸ್ ಅವರ ಮೇಲಿನ ಹಲ್ಲೆ ಖಂಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ತಾಲ್ಲೂಕು ಭೋವಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಯಿತು.
ಬೆಂಗಳೂರಿನ ಕೆ.ಜೆ. ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಹಿಂಸಾತ್ಮಕ ಘಟನೆಯಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿ ಕೌರ್ಯ ಮೆರೆದಿರುವ ದೇಶ ವಿರೋಧಿ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು. ಹಾಗೆಯೇ ಉತ್ತರ ಪ್ರದೇಶ ಮಾದರಿಯಲ್ಲಿ ಹಲ್ಲೆಕೋರರ ಆಸ್ತಿ ಜಪ್ತಿ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಶಾಸಕರ ಕುಟುಂಬಕ್ಕೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಅಖಂಡ ಶ್ರೀನಿವಾಸ್ ಅವರ ಬೆಂಬಲಕ್ಕೆ ಭೋವಿ ಸಮಾಜದ ಎಲ್ಲಾ ಮಠಾಧೀಶರು ಹಾಗೂ ಮುಖಂಡರು ಇದ್ದಾರೆ ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.