ಕರ್ನಾಟಕ

karnataka

ETV Bharat / state

ಸೊರಬದಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರ ದುರ್ಮರಣ.. - etv bharat

ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಇಬ್ಬರು ಬೈಕ್ ಸವಾರರು ಪ್ರತ್ಯೇಕ ಪ್ರಕರಣದಲ್ಲಿ ಸಾವು

By

Published : Jul 24, 2019, 11:37 PM IST

Updated : Jul 24, 2019, 11:42 PM IST

ಶಿವಮೊಗ್ಗ: ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸೊರಬ ತಾಲೂಕು ಹಳೆಬೈಲು, ಎನ್.ಹೊಳೆಕಟ್ಟೆ ಗ್ರಾಮಗಳ ಮಧ್ಯೆ ಖಾಸಗಿ ಬಸ್‌ವೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಸವಾರ ಕೆಳಗೆ ಬಿದ್ದಾಗ, ಆತನ ತಲೆ ಮೇಲೆ ಹರಿದ ಪರಿಣಾಮ ಬೈಕ್ ಸವಾರ ರವಿ(40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿ ಶಿಕಾರಿಪುರ ತಾಲೂಕು ಸುಣ್ಣದ ಕೊಪ್ಪ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬೈಕ್​ಗಳ ನಡುವೆ ನಡೆದ ಅಪಘಾತದಲ್ಲಿ ಪರಶುರಾಮಪ್ಪ(45) ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ, ಗಾಯಾಳು ಸೊರಬ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ಪ್ರಕರಣಗಳು ಸೊರಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Last Updated : Jul 24, 2019, 11:42 PM IST

ABOUT THE AUTHOR

...view details