ಶಿವಮೊಗ್ಗ: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ವಿದ್ಯಾನಗರದಲ್ಲಿ ನಡೆದಿದೆ.
ಲಾಕ್ಡೌನ್ ಬ್ಯಾರಿಕೇಡ್ ತಂದ ಆಪತ್ತು: ಬೈಕ್ ಸವಾರ ಸಾವು - shivmog crime news
ಲಾಕ್ಡೌನ್ ಜಾರಿ ಇರುವ ವಿದ್ಯಾನಗರದ ಡಬಲ್ ರಸ್ತೆಯಲ್ಲಿ ರಾತ್ರಿ ವೇಳೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿಯೇ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಬೈಕ್ ಸವಾರ ಸಾವು
ಲಾಕ್ಡೌನ್ ಇರುವ ವಿದ್ಯಾನಗರದ ಡಬಲ್ ರಸ್ತೆಯಲ್ಲಿ ರಾತ್ರಿ ವೇಳೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಿಂದ ರಸ್ತೆಯ ಅರ್ಧ ಭಾಗ ಏಕ ಸಂಚಾರಕ್ಕೆ ಬ್ಯಾರಿಕೇಡ್ ಹಾಕಲಾಗಿದೆ. ಈ ಹಿನ್ನೆಲೆ ಲಾರಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದರೆ, ಹಿಂಬದಿ ಸವಾರನಿಗೆ ತೀವ್ರ ಗಾಯವಾಗಿದೆ. ಘಟನೆ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.