ಶಿವಮೊಗ್ಗ:ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಾಗರದ ಹೊಸೂರು ಗ್ರಾಮದಲ್ಲಿ ನಡೆದಿದೆ.
ಬೈಕ್ಗೆ ಕೆಎಸ್ಆರ್ಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು! - Shimoga accident news
ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದದಲ್ಲಿ ನಡೆದಿದೆ.
ಅಪಘಾತ
ಸಾಗರ ತಾಲೂಕು ಹೊಸೂರಿನ ಬಳಿ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಬಸ್, ಸಾಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲಿಯೇ ಬಿದ್ದು ಸಾವನ್ನಪ್ಪಿದ್ದಾನೆ.
ಮೃತ ಯುವಕ ಚಿಕ್ಕಮಗಳೂರು ಜಿಲ್ಲೆ ತರಿಕೆರೆ ಮೂಲದವನು ಎಂದು ತಿಳಿದು ಬಂದಿದೆ. ಯುವಕನ ಹೆಸರು ತಿಳಿದುಬಂದಿಲ್ಲ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.