ಶಿವಮೊಗ್ಗ: ಬೈಕ್ ಕದ್ದು ಮಾರಾಟ ಮಾಡುತ್ತಿದ್ದವನನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಿಲ್ಲೆಯ ಹನುಮಂತನಗರದ ರಾಜಪ್ಪ(35) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 2 ಲಕ್ಷ 65 ಸಾವಿರ ರೂ ಮೌಲ್ಯದ 9 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆ ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ರಾಜಪ್ಪ(35)ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.