ಶಿವಮೊಗ್ಗ:ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾಳೆ ಹಾಗೂ ನಾಡಿದ್ದು, ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳು ಹಾಗೂ ಮುಂಬರುವ ಚುನಾವಣೆಗಳನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.
ದಾವಣಗೆರೆಯಲ್ಲಿ ನಾಳೆ ಬಿಜೆಪಿ ಕಾರ್ಯಕಾರಣಿ ಸಭೆ ಆರಂಭ: ಬಿ.ವೈ ವಿಜಯೇಂದ್ರ ವಿಜಯೇಂದ್ರ ಸಚಿವ ಸಂಪುಟ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಹುದ್ದೆಯ ನಿರೀಕ್ಷೆಯನ್ನಿಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಯಾರಿಗೆ ಯಾವ ಸಂದರ್ಭದಲ್ಲಿ ಯಾವ ಸ್ಥಾನ ನೀಡಬೇಕು ಎಂಬುದನ್ನು ತಿರ್ಮಾನ ಮಾಡುತ್ತಾರೆ. ನಾನು ಯಾವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕು ಅಥವಾ ಚುನಾವಣೆಗೆ ನಿಲ್ಲಬೇಕೇ ಅಥವಾ ಬೇಡವೇ ಎಂಬುದನ್ನೂ ಪಕ್ಷದ ವರಿಷ್ಠರೇ ತೀರ್ಮಾನ ಮಾಡಲಿದ್ದಾರೆ ಎಂದರು.
ದೇವಸ್ಥಾನ ತೆರವು ವಿಷಯಕ್ಕೆ ತಕ್ಕಂತೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ದೇವಾಲಯ ಒಡೆಯಲಾಗುತ್ತಿದೆ. ಆದರೆ, ಸಿಎಂ ಕ್ಯಾಬಿನೇಟ್ನಲ್ಲಿ ದೇವಾಲಯಗಳ ತೆರವಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ನಮಗೆ ಏಕೆ ಹಿನ್ನಡೆಯಾಗಿದೆ ಎಂದು ತಿಳಿದುಕೊಳ್ಳಬೇಕಿದೆ. ಜೊತೆಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆಯೇ ಎಂಬುದನ್ನು ಗಮನಿಸಬೇಕು. ಮುಂದಿನ ದಿನಗಳಲ್ಲಿ ಈಸಮಸ್ಯೆ ಪರಿಹಾರವಾಗಲಿದೆ ಎಂದರು.
ಓದಿ:ಧಾರವಾಡದಲ್ಲಿಂದು 85 ಸಾವಿರ ಕೋವಿಡ್ ಲಸಿಕೆ ವಿತರಣೆ: ಕಿಮ್ಸ್ ಆಸ್ಪತ್ರೆಯತ್ತ ಜನಸಾಗರ..