ಶಿವಮೊಗ್ಗ:ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಸಂಗ್ರಹ ಅಭಿಯಾನಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ,ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದ್ರು.
ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಬಿಜೆಪಿ ಪಣ: ಸಚಿವ ಈಶ್ವರಪ್ಪ - drug free karnataka campaign
ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಬಿಜೆಪಿ ಪಣತೊಟ್ಟಿದ್ದು, ಬಿಜೆಪಿ ಪಕ್ಷ ಅಧಿಕಾರದಲ್ಲಿರುವಾಗಲೇ ಡ್ರಗ್ಸ್ ಮುಕ್ತ ಕರ್ನಾಟಕ ಮಾಡ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ನಗರ ಬಿಜೆಪಿ ವತಿಯಿಂದ ನಗರದ ಶಿವಪ್ಪನಾಯಕ ವೃತ್ತದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಬಿಜೆಪಿ ಪಕ್ಷ ಪಣತೊಟ್ಟಿದ್ದು, ಯಾರು ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಹಾಗೂ ಬಿಜೆಪಿ ಪಕ್ಷ ಅಧಿಕಾರದಲ್ಲಿರುವಾಗಲೇ ಡ್ರಗ್ಸ್ ಮುಕ್ತ ಕರ್ನಾಟಕ ಮಾಡ್ತೇವೆ ಎಂದರು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಜೆಡಿಎಸ್ ,ಕಾಂಗ್ರೆಸ್ ಬೆಂಬಲ ನೀಡದಿರುವುದು ವಿಪರ್ಯಾಸ. ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕದ ನಿಲುವಿಗೆ ವಿರೋಧ ಪಕ್ಷಗಳು ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಬೇಕಿತ್ತು, ಆದರೆ, ಆ ಕೆಲಸವನ್ನು ವಿರೋಧ ಪಕ್ಷಗಳು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಆರ್ಯ ವೈಶ್ಯ ನಿಗಮ ಮಂಡಳಿ ಅಧ್ಯಕ್ಷರಾದ ಡಿ.ಎಸ್ ಅರುಣ್, ಸೋಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.