ಶಿವಮೊಗ್ಗ:ರಾಷ್ಟ್ರೀಯ ಪೌರತ್ವದಿಂದ ಮುಸ್ಲಿಂ ಸಮಾಜದವರಿಗೆ ಯಾವುದೇ ನಷ್ಟವಿಲ್ಲ. ಮುಸ್ಲಿಂ ಸಮಾಜವನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನುಪ್ರಕಾಶ್ ಹೇಳಿದರು.
ಸಿಎಎ ಕಾಯ್ದೆ ಒಪ್ಪದೆ ಹೋದ್ರೆ ಮುಸ್ಲಿಂ ಸಮಾಜಕ್ಕೇ ನಷ್ಟ: ಭಾನುಪ್ರಕಾಶ್ - ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಹಿ ಸಂಗ್ರಹ ಕಾರ್ಯಕ್ರಮ
ಇಂದು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸಿಎಎ ಕಾಯ್ದೆ ಪರವಾಗಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಬಿಜೆಪಿ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಸಿಎಎ ಪರ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ಮಸೀದಿಗಳಿಗೆ ತೆರಳಿ ಸಿಎಎಯಿಂದ ಮುಸ್ಲಿಂ ಸಮಾಜಕ್ಕೆ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. 70 ವರ್ಷಗಳಿಂದ ನಿಮ್ಮೊಂದಿಗೆ ನಾವಿದ್ದೇವೆ ಎಂದೇಳಿಕೊಂಡು ಕಾಂಗ್ರೆಸ್ ಪಕ್ಷ ಏನನ್ನೂ ಮಾಡಿಲ್ಲ. ಇದರಿಂದ ನಷ್ಟ ಅನಿಭವಿಸಿದ್ದೇವೆ. ಈ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ ಎಂದರು.
ಬಳಿಕ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸಿಎಎ ಕಾಯ್ದೆಯಿಂದ ದೇಶಕ್ಕೆ ಒಳ್ಳೆಯದಾಗಲೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಾಯ್ದೆಯನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದ್ದಾರೆ. ನಾವು ಮೋದಿ, ಶಾ ಅವರ ಜೊತೆಗಿದ್ದೇವೆ. ಈ ಕಾಯ್ದೆ ಪರ ಇಂದು ಸಹಿ ಸಂಗ್ರಹ ಮಾಡುತ್ತಿದ್ದೇವೆ. ಸಹಿ ಸಂಗ್ರಹ ಅಭಿಯಾನದಲ್ಲಿ ಸಾರ್ವಜನಿಕರು ಸಹ ಸಹಿ ಹಾಕಿ ಪೌರತ್ವ ಕಾಯ್ದೆಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು.