ಶಿವಮೊಗ್ಗ: ಚಿಲುಮೆ ಸಂಸ್ಥೆಗೆ ಅನುಮತಿ ನೀಡಿದ ಸಿದ್ದರಾಮಯ್ಯ ರಾಜೀನಾಮೆ ಮೊದಲು ಪಡೆದು ನಂತರ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆ ಕೇಳಲಿ ಎಂದು ಕಾಂಗ್ರೆಸ್ನ ಸುರ್ಜೆವಾಲ ಅವರಿಗೆ ಬಿಜೆಪಿಯ ಕಾರ್ಯದರ್ಶಿ ರವಿಕುಮಾರ್ ಸವಾಲು ಹಾಕಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸುರ್ಜೆವಾಲ ಹಾಗೂ ಸಿದ್ದರಾಮಯ್ಯ ನಮ್ಮ ಸಿಎಂ ಬಗ್ಗೆ ಬಹಳ ಮಾತನಾಡಿದ್ದಾರೆ. 2012 ರಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ನೀಡಿ, ಬಿಎಲ್ಓಗಳ ನೇಮಕ ಮಾಡಿಕೊಳ್ಳಲು ಸೂಚನೆ ನೀಡಿ, ಈಗ ನಮ್ಮ ಸಿಎಂ ರಾಜೀನಾಮೆ ಕೇಳ್ತಾ ಇದ್ದಾರೆ ಎಂದು ಕಿಡಿಕಾರಿದರು.
ಸಿಎಂ ರಿಂದ ಸಂಕಲ್ಪ ಯಾತ್ರೆ ಮುಂದುವರೆಯುತ್ತದೆ:ನಾಡಿದ್ದು ನವೆಂಬರ್ 27 ರಂದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬೈರತಿ ಬಸವರಾಜ್, ಗೋವಿಂದ ಕಾರಜೋಳ ಹಾಗೂ ಶ್ರೀರಾಮುಲು ಅವರು ಶೃಂಗೇರಿ ಹಾಗೂ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ.
ಡಿಸೆಂಬರ್ 2 ರಂದು ಬೆಳಗಾವಿಯ ರಾಮದುರ್ಗದಲ್ಲಿ ಯಾತ್ರೆ ನಡೆಯಲಿದೆ. ಡಿ.7 ಮತ್ತು 8 ರಂದು ಕುಣಿಗಲ್, ತಿಪಟೂರು, ಕೊರಟಗೆರೆ, ಮಧುಗಿರಿ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ. ಪ್ರತಿ ಕ್ಷೇತ್ರದಲ್ಲಿ ನಡೆಯುವ ಸಂಕಲ್ಪ ಯಾತ್ರೆಯಲ್ಲಿ ಕನಿಷ್ಠ 15 ಸಾವಿರ ಜನ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ರಾಜ್ಯದ ಸಿಎಂ ಬೊಮ್ಮಾಯಿ 25 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಈಗಾಗಲೇ 20 ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ ಎಂದರು.
ಪ್ರತಿ ಕ್ಷೇತ್ರದಲ್ಲಿ ನಡೆಯುವ ಸಂಕಲ್ಪ ಯಾತ್ರೆಯಲ್ಲಿ ಕನಿಷ್ಠ 15 ಸಾವಿರ ಜನ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಸಿಎಂ ಬೊಮ್ಮಾಯಿ 25 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಈಗಾಗಲೇ 20 ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಅಲ್ಲದೇ ನಮ್ಮ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು 12 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದಾರೆ. ಅಧಿವೇಶನ ಆರಂಭವಾಗುವ ಒಳಗಾಗಿ ಸುಮಾರು 75 ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕೆಂಬ ಯೋಜನೆಯಿದೆ ಎಂದರು.
ಓದಿ:ಚಿಲುಮೆ ಸಂಸ್ಥೆ ರವಿಕುಮಾರ್ ಆಪ್ತನ ಮನೆ, ಕಚೇರಿಗಳ ಮೇಲೆ ಪೊಲೀಸ್ ದಾಳಿ