ಕರ್ನಾಟಕ

karnataka

ETV Bharat / state

ಹರ್ಷ ಹತ್ಯೆ ಪ್ರಕರಣದ ಕುರಿತು ನಮ್ಮ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಲಿದೆ : ಕಟೀಲ್​​

ಕೊಲೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಳಿನ್ ಕುಮಾರ್ ಕಟೀಲ್​​​
ನಳಿನ್ ಕುಮಾರ್ ಕಟೀಲ್​​​

By

Published : Feb 23, 2022, 8:19 PM IST

ಶಿವಮೊಗ್ಗ : ಹರ್ಷ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಕಾಣದ ಕೈಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​​ ಹೇಳಿದ್ದಾರೆ.

ನಗರದ ಹರ್ಷ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಡೀ ಪ್ರಕರಣ ಕುರಿತು ನಮ್ಮ ಸರ್ಕಾರ ಉನ್ನತ ಮಟ್ಟದ ತನಿಖೆಯನ್ನು ನಡೆಸಲಿದೆ. ಪ್ರಕರಣದ ಹಿಂದೆ ಕಾಣದ ಕೈಗಳಿರುವ ಶಂಕೆ ಇದ್ದು, ಅದನ್ನು ಶೀಘ್ರದಲ್ಲೇ ಹೊರಗೆಳೆಯಲಾಗುವುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​​ ಹೇಳಿಕೆ

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದ ಕಟೀಲ್​, ಘಟನೆ ನಡೆದ 48 ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿರುವ ಪೊಲೀಸರ ಕಾರ್ಯ ಶ್ಲಾಘನೀಯ. ಇದಕ್ಕಾಗಿ ಇಲಾಖೆಗೆ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ : ಹತ್ಯೆಗೂ ಮುನ್ನ ಹರ್ಷನಿಗೆ ಹುಡುಗಿಯರಿಂದ ವಿಡಿಯೋ ಕಾಲ್: ಕೊಲೆ ರಹಸ್ಯ ಬಿಚ್ಚಿಟ್ಟ ಸ್ನೇಹಿತ

ಸಚಿವ ಕೆ.ಎಸ್. ಈಶ್ವರಪ್ಪ, ನಮ್ಮ ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಮೃತನ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲಾಗಿದೆ. ನಿಮ್ಮ ಜೊತೆಗೆ ಸರ್ಕಾರ ಇದೆ ಎಂದು ಹೇಳುವ ಮೂಲಕ ಧೈರ್ಯ ತುಂಬಲಾಗಿದೆ. ಎಸ್​​ಡಿಪಿಐ ಬ್ಯಾನ್ ಮಾಡುವ ಕುರಿತು ಕೆಲವೊಂದು ಮಾಹಿತಿ ಕಲೆಹಾಕಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details