ಶಿವಮೊಗ್ಗ: ನಗರದ ಪ್ರಮುಖ ರಸ್ತೆಗಳಲ್ಲಿ ಗಡಿ ಭದ್ರತಾ ಪಡೆಯ ಸೈನಿಕರು ಪಥಸಂಚಲನ ನಡೆಸುವ ಮೂಲಕ ಗಮನ ಸೆಳೆದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭದ್ರತಾ ಪಡೆಯಿಂದ ಪಥಸಂಚಲನ - ಲೋಕಸಭಾ ಚುನಾವಣೆ
ಚುನಾವಣಾ ಕಣ ರಂಗೇರುತ್ತಿದ್ದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗಡಿ ಭದ್ರತಾ ಪಡೆಯ ಸೈನಿಕರು ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು.
ಗಡಿ ಭದ್ರತಾ ಪಡೆಯಿಂದ ಪಥಸಂಚಲನ
ಚುನಾವಣೆ ಕಾವೇರುತ್ತಿರುವ ನಡುವೆಯೇ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಿ.ಎಸ್.ಎಫ್ , ಸಿಆರ್ಪಿಎಫ್ ,ಕೆಎಸ್ಆರ್ಪಿ ಪಡೆಯ ಸಿಬ್ಬಂದಿ ಪಥ ಸಂಚಲನ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.