ಶಿವಮೊಗ್ಗ:ರಸ್ತೆ ದಾಟುತ್ತಿದ್ದ ಬಾಲಕನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ.
ಸಾಗರದಲ್ಲಿ ಅಪರಿಚಿತ ವಾಹನ ಡಿಕ್ಕಿ: ಬಾಲಕ ಸಾವು - Sagara crime latest news
ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬಾಲಕ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.
Boy died
ಸಂಜಯ್(15) ಮೃತ ಬಾಲಕ. ಈತ ಸಾಗರದ ಎಲ್‌ಬಿಎಸ್ ನಗರದ ನಿವಾಸಿಯಾಗಿದ್ದು, ರಸ್ತೆ ದಾಟುತ್ತಿದ್ದ ಸಮಯದಲ್ಲಿ ಜೋಗದ ಕಡೆ ಹೊರಟಿದ್ದ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.