ಶಿವಮೊಗ್ಗ:ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಸ್.ಯಡಿಯೂರಪ್ಪ ಇದೇ ಮೊದಲ ಬಾರಿಗೆ ಶಿವಮೊಗ್ಗ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು ರಾತ್ರಿ ಶಿವಮೊಗ್ಗ ತಲುಪಲಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರಕ್ಕೆ ಆಗಮಿಸುತ್ತಿರುವ ಬಿಎಸ್ವೈ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಸ್.ಯಡಿಯೂರಪ್ಪನವರು ತವರು ಕ್ಷೇತ್ರಕ್ಕೆ ಆಗಮಿಸುತ್ತಿದ್ದು, 4 ದಿನಗಳ ಕಾಲ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಶಿವಮೊಗ್ಗದ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದು, ಶನಿವಾರದಂದು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಂತರ ಭಾನುವಾರದಂದು ಬೆಳಗ್ಗೆ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳಿ ಅಲ್ಲಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಶಿಕಾರಿಪುರದ ನಿವಾಸದಲ್ಲೆ ವಾಸ್ತವ್ಯ ಮಾಡಲಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬಳಿಕ ತವರು ಕ್ಷೇತ್ರಕ್ಕೆ ಆಗಮಿಸುತ್ತಿದ್ದು ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿಯೇ ಇರಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.