ಕರ್ನಾಟಕ

karnataka

ETV Bharat / state

ಬಿಎಸ್​​ವೈ, ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿದ್ದಾರೆ: ಈಶ್ವರಪ್ಪ ವಿಶ್ವಾಸ - Shimoga District rain news

ಇಬ್ಬರು ನಾಯಕರ ಅಭಿಮಾನಿಗಳು ಪಕ್ಷಭೇದ ಮರೆತು ದೇವರಲ್ಲಿ ಪ್ರಾರ್ಥಿಸುತ್ತಿದ್ದು, ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿದ್ದಾರೆ ಎಂದಿದ್ದಾರೆ. ಕೆಲ ಶಾಸಕರಿಗೂ ಸೋಂಕು ತಗುಲಿದ್ದು, ಅವರೆಲ್ಲರೂ ಗುಣಮುಖರಾಗುತ್ತಾರೆ ಎಂದು ಸಚಿವ ಕೆ ಎಸ್​ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BSY, Siddaramaiah will recover very shortly: Ishwarappa
ಬಿಎಸ್​​ವೈ, ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿದ್ದಾರೆ: ಈಶ್ವರಪ್ಪ ವಿಶ್ವಾಸ

By

Published : Aug 6, 2020, 4:30 PM IST

ಶಿವಮೊಗ್ಗ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರತಿಪಕ್ಷ‌ ನಾಯಕ ಸಿದ್ದರಾಮಯ್ಯ ಅವರು ಕೊರೊನಾದಿಂದ ಬೇಗ ಗುಣರಾಗಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಎಸ್​​ವೈ, ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿದ್ದಾರೆ: ಈಶ್ವರಪ್ಪ ವಿಶ್ವಾಸ

ಸಿಎಂ ಬಿಎಸ್​​​​ವೈ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಕೊರೊನಾ ಬಂದ ಕಾರಣ ಅವರ ಅಭಿಮಾನಿಗಳು ಪಕ್ಷಭೇದ ಮರೆತು ದೇವರಲ್ಲಿ ಪ್ರಾರ್ಥನೆ-ಪೂಜೆ ಸಲ್ಲಿಸಿದ್ದಾರೆ. ರಾಜ್ಯದ ಕೆಲ ಶಾಸಕರಿಗೂ ಸಹ ಕೊರೊನಾ ಬಂದಿದೆ.‌ ಇವರೆಲ್ಲಾ ಬೇಗ ಗುಣಮುಖರಾಗುತ್ತಾರೆ ಎಂದರು.

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು‌ ಜಿಲ್ಲಾಡಳಿತ ಸನ್ನದ್ಧವಾಗಿದೆ. ಕಳೆದ ಬಾರಿ ಜಿಲ್ಲೆಯಲ್ಲಿ ಏಕಾಏಕಿ ಪ್ರವಾಹ ಬಂದಿತ್ತು. ಈ ಬಾರಿ ಆ ರೀತಿಯ ಪರಿಸ್ಥಿತಿ ಇಲ್ಲ. ಆದರೂ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಯಲ್ಲಿದೆ ಎಂದು ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗ ನಗರದ ಕೆಲ ಭಾಗದಲ್ಲಿ ಮನೆಗಳಿಗೆ ನೀರು‌ ನುಗ್ಗಿತ್ತು. ಈ ಬಾರಿ ಆ ರೀತಿಯ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ ಜರುಗಿಸಲಾಗಿದೆ. ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಮಳೆಯಿಂದ ನದಿ ಹಾಗೂ ಹಲವು ಹಳ್ಳಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಕೆಲ ಕಡೆ ವಿದ್ಯುತ್ ಸಮಸ್ಯೆಯಾಗಿದೆ. ವಿದ್ಯುತ್ ಕಂಬಗಳ ದುರಸ್ತಿಗೆ ಮೆಸ್ಕಾಂ ಇಲಾಖೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದರು.

ABOUT THE AUTHOR

...view details