ಶಿವಮೊಗ್ಗ: ಖಾಸಗಿ ಬಸ್ - ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆಕೊಪ್ಪ ಹುಲಿ- ಸಿಂಹಧಾಮದ ಬಳಿ ನಡೆದಿದೆ.
ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು - ಬೈಕ್ಗೆ ಬಸ್ ಡಿಕ್ಕಿ
ಶಿವಮೊಗ್ಗದ ತಾವರೆಕೊಪ್ಪ ಹುಲಿ- ಸಿಂಹಧಾಮದ ಬಳಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ಮೃತರನ್ನು ಮುದ್ದಿನಕೊಪ್ಪ ನಿವಾಸಿಗಳಾದ ದಶರಥ(40) ಹಾಗೂ ಚಂದ್ರಾನಾಯ್ಕ(42) ಎಂದು ಗುರುತಿಸಲಾಗಿದೆ. ಇಬ್ಬರು ಕೊಲಿ ಮಾಡಿ ಜೀವನ ನಡೆಸುತ್ತಿದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ಸಾಗರ ಕಡೆಯಿಂದ ವಿಆರ್ಎಲ್ ಬಸ್ ಆಗಮಿಸುತ್ತಿದ್ದ ಬಸ್ - ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದೆ.
ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಬಸ್ ವಶಕ್ಕೆ ಪಡೆದುಕೊಂಡು ಕೇಸು ದಾಖಲಿಸಿದ್ದಾರೆ.